ಮಣಿಪಾಲದ ಎಂ.ಐ.ಸಿ ಕ್ಯಾಂಪಸ್ ನಲ್ಲಿರುವ ರೇಡಿಯೋ ಮಣಿಪಾಲ್ ಸಮುದಾಯ ಬಾನುಲಿ ಕೇಂದ್ರದಲ್ಲಿ ಮಣಿಪಾಲ್ ಕಾಲೇಜ್ ಆಫ್ ನರ್ಸಿಂಗ್ ಮಾಹೆಯ ವಿದ್ಯಾರ್ಥಿಗಳಿಂದ ಎಪಿಲೆಪ್ಸಿ ಅಥವಾ ಮೂರ್ಛೆ ರೋಗದ ಕುರಿತು ಮಾಹಿತಿ ಕಾರ್ಯಕ್ರಮ ಪ್ರಸಾರವಾಗಲಿದೆ.
ಇದು ನವೆಂಬರ್ 29 ಶುಕ್ರವಾರ ಸಂಜೆ 6.30ಕ್ಕೆ ಪ್ರಸಾರವಾಗಲಿದೆ ಮತ್ತು ಶನಿವಾರ ಮದ್ಯಾಹ್ನ 2.30ಕ್ಕೆ ಮರುಪ್ರಸಾರವಾಗಲಿದೆ.
ರೇಡಿಯೊ ಮಾತ್ರವಲ್ಲದೆ ಆಂಡ್ರಾಯ್ಡ್ ಫೋನ್ ನ https://play.google.com/store/apps/details?id=com.atc.radiomanipal ಮತ್ತು ಐಫೋನ್ ನ https://itunes.apple.com/app/id6447231815 ಲಿಂಕ್ ಮೂಲಕ ರೇಡಿಯೊ ಮಣಿಪಾಲ್ ಆಪ್ ಡೌನ್ಲೋಡ್ ಮಾಡಿ ಈ ಕಾರ್ಯಕ್ರಮ ಕೇಳಬಹುದಾಗಿದೆ ಎಂದು ಮಣಿಪಾಲ ಮಾಹೆಯ ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್ ಕಮ್ಯುನಿಕೇಶನ್ ಕ್ಯಾಂಪಸ್ ನಲ್ಲಿರುವ
ರೇಡಿಯೊ ಮಣಿಪಾಲ್ ಸಮುದಾಯ ಬಾನುಲಿ ಕೇಂದ್ರದ ಪ್ರಕಟಣೆ ತಿಳಿಸಿದೆ.