ಕಡಬ ತಾಲ್ಲೂಕಿನ ನೂಜಿಬಾಳ್ತಿಲ ಗ್ರಾಮದ ಒರುoಬಾಲು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಟಾ ವಾರ್ಷಿಕೋತ್ಸವದ ಸಂಭ್ರಮವು ದಿನಾಂಕ 10/01/2025ನೇ ಶುಕ್ರವಾರದಂದು ಕೆಮ್ಮಿoಜೆ ನಾಗೇಶ್ ತಂತ್ರಿಗಳವರ ನೇತೃತ್ವದಲ್ಲಿ ಒರುಬಾಂಲು ಶ್ರೀ ಉಮಾಮಹೇಶ್ವರ ದೇವರ ಪ್ರತಿಷ್ಠಾ ವಾರ್ಷಿಕೋತ್ಸವದ ಅಂಗವಾಗಿ ಬೆಳಿಗ್ಗೆ ಗಂಟೆ 7.30ರಿಂದ ದೇವತಾ ಪ್ರಾರ್ಥನೆ, ಆಚಾರ್ಯವರಣ,ಗಣಪತಿ ಹೋಮ, ಪಂಚವಿಂಶತಿ ನಡೆಯಲಿದೆ. ನಂತರ ಸಾಮೂಹಿಕ ಸತ್ಯನಾರಾಯಣ ದೇವರ ಪೂಜೆ ನಡೆಯಲಿದೆ.ಬೆಳಿಗ್ಗೆ 11.00 ಗಂಟೆಗೆ ಶ್ರೀ ದೇವರಿಗೆ ಕಳಶಾಭಿಷೇಕ, ನಾಗ ದೇವರಿಗೆ ತಂಬಿಲ ಸೇವೆ, ಪರಿವಾರ ದೈವಗಳಿಗೆ ತಂಬಿಲ ಸೇವೆ ನಡೆಯಲಿದೆ. ಮದ್ಯಾಹ್ನ 12.30 ಮಹಾಪೂಜೆ, ಪ್ರಸಾದ ವಿತರಣೆ ನಡೆಯಲಿದೆ ಎಂದು ಪ್ರಕಟಣೆಗೆ ತಿಳಿಸಿದ್ದಾರೆ.