ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಚಿಕಿತ್ಸೆಗಾಗಿ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಜ್ವರ, ಕೆಮ್ಮು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಏ.22ರಂದು ಎಸ್.ಎಂ. ಕೃಷ್ಣರನ್ನು ಬೆಂಗಳೂರಿನ ವಿಠಲ ಮಲ್ಯ ರಸ್ತೆಯ ವೈದೇಹಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಬಳಿಕ ಅವರನ್ನು ಡಿಸ್ಚಾರ್ಜ್ ಮಾಡಲಾಗಿತ್ತು. ಇದೀಗ ಇಂದು ಮತ್ತೆ ಅವರನ್ನು ನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.
91 ವರ್ಷ ವಯಸ್ಸಿನ ಎಸ್.ಎಂ. ಕೃಷ್ಣ ಅವರು ಪದೇಪದೇ ಅನಾರೋಗ್ಯಕ್ಕೀಡಾಗುತ್ತಿದ್ದಾರೆ. ಸದ್ಯಕ್ಕೆ ಅವರ ಆರೋಗ್ಯ ಸ್ಥಿರವಾಗಿದೆ. ಆದರೆ ಆಸ್ಪತ್ರೆಗೆ ಮತ್ತೆ ಯಾಕೆ ದಾಖಲಿಸಲಾಗಿದೆ ಎಂಬುದು ತಿಳಿದುಬಂದಿಲ್ಲ.