ಮಲ್ಪೆ : ಪರೀಕ್ಷೆ ನಮ್ಮ ಜೀವನದ ಅವಿಭಾಜ್ಯ ಅಂಗ ಇದನ್ನು ಹಬ್ಬದಂತೆ ಸಂಭ್ರಮಿಸಬೇಕು ಎಂದು ಖ್ಯಾತ ವ್ಯಕ್ತಿತ್ವ ವಿಕಸನ ತರಬೇತುದಾರ ರಾಘವೇಂದ್ರ ಪ್ರಭು ಕವಾ೯ಲು ಹೇಳಿದರು.
ಅವರು ಸರ್ಕಾರಿ ಪದವಿ ಪೂರ್ವ ಕಾಲೇಜು, ಮಲ್ಪೆ ಕಿರಿಯ ಮಹಾ ವಿದ್ಯಾಲಯ (ಮೀನುಗಾರಿಕಾ ) ದಲ್ಲಿ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ಫೆ.6ರಂದು ಏರ್ಪಡಿಸಲಾದ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆ ಸಿದ್ಧತಾ ತರಬೇತಿ ಕಾಯಾ೯ಗಾರ ದಲ್ಲಿ ಮಾತನಾಡಿದರು.
ಆತ್ಮವಿಶ್ವಾಸ ದೃಢಸಂಕಲ್ಪ, ಉತ್ತಮ ಅಧ್ಯಯನ ಸಮಯ ಪರಿಪಾಲನೆ ಯೊಂದಿಗೆ ಪರೀಕ್ಷೆಯನ್ನು ಬರೆಯಬೇಕು ಯಾವುದೇ ರೀತಿಯ ಒತ್ತಡಕ್ಕೆ ಒಳಗಾಗದೆ ಪರೀಕ್ಷೆಯನ್ನು ಎದುರಿಸಿದ್ದಲ್ಲಿ ಉತ್ತಮ ಅಂಕಗಳನ್ನು ಪಡೆಯಲು ಸಾಧ್ಯ ಎಂದು ಹಲವಾರು ಉದಾಹರಣೆಗಳೊಂದಿಗೆ ವಿವರಿಸಿದರು.
ಕಾರ್ಯಕ್ರಮವನ್ನು ಹಳೆ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷೆ ಡಾ. ಗೋದಾವರಿ ಉದ್ಘಾಟಿಸಿ ಶುಭ ಹಾರೈಸಿದರು. ಕಾಲೇಜಿನ ಹಿರಿಯ ಉಪನ್ಯಾಸಕ ಎಸ್.ಜಿ ಭಾಗವತ್ ವಿದ್ಯಾರ್ಥಿಗಳು ಉತ್ತಮ ಅಂಕಗಳನ್ನು ಪಡೆದು ಸಮಾಜದಲ್ಲಿ ಯಶಸ್ವಿ ಜೀವನ ಸಾಗಿಸಬೇಕು ಎಂದರು.
ವೇದಿಕೆಯಲ್ಲಿ ಹಳೆ ವಿದ್ಯಾರ್ಥಿ ಸಂಘದ ಮಾಜಿ ಕಾರ್ಯದರ್ಶಿ ಶಿವರಾಮ ಕಲ್ಮಾಡಿ ಪ್ರೌಢಶಾಲೆ ವಿಭಾಗದ ಹಿರಿಯ ಶಿಕ್ಷಕ ಸತೀಶ್ ಭಟ್ ಉಪಸ್ಥಿತರಿದ್ದರು. ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಕರುಣಾಕರ ಬಂಗೇರ ನಿರೂಪಿಸಿ ವಂದಿಸಿದರು.ಕಾಲೇಜಿನ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಉಪಸ್ಥಿತರಿದ್ದರು.

