ಎಕ್ಸಲೆಂಟ್ ಸ್ವಾತಂತ್ರೋತ್ಸವ ಸಂಭ್ರಮ; ತಹಶೀಲ್ದಾರ್ ಧ್ವಜಾರೋಹಣ

0
46

ಮೂಡುಬಿದಿರೆ : ಎಕ್ಸಲೆಂಟ್ ಸ್ವಾತಂತ್ರೋತ್ಸವ ಸಂಭ್ರಮವನ್ನು ಮೂಡುಬಿದಿರೆ ತಾಲೂಕು ತಹಶೀಲ್ದಾರ್ ಶ್ರೀಧರ್ ಎಸ್. ಮುಂದಲಮನಿ ಧ್ವಜಾರೋಹಣ ಮಾಡುವುದರೊಂದಿಗೆ ಆಚರಿಸಲಾಯಿತು. ಬಳಿಕ ಮಾತನಾಡಿದ ಅವರು ಬದುಕಿನಲ್ಲಿ ಅನಿರೀಕ್ಷಿತಗಳು ಸಂಭವಿಸಿದಾಗ ಅದನ್ನು ಎದುರಿಸಿ ಈ ದೇಶದ ಘನತೆ ಗೌರವ ಕಾಪಾಡುವಲ್ಲಿ ನಾವು ಕಟಿಬದ್ಧರಾಗಬೇಕು ಎಂದರು. ಇದೇ ಸಂದರ್ಭದಲ್ಲಿ ಮೂಡುಬಿದಿರೆ ಎಕ್ಸಲೆಂಟ್ ಸಂಸ್ಥೆಯ ನೂತನ ಲಾಂಛನವನ್ನು ತಹಶೀಲ್ದಾರ್ ಬಿಡುಗಡೆಗೊಳಿಸಿದರು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಅಧ್ಯಕ್ಷರಾದ ಯುವರಾಜ್ ಜೈನ್ ಪ್ರತಿಕೂಲತೆಗಳ ನಡುವೆ ದೃಢ ಚಿತ್ತದಿಂದ ಬದುಕಿ ಗೆದ್ದು ನಾಡಿಗೆ, ದೇಶಕ್ಕೆ ಕೀರ್ತಿ ತರಬೇಕು ಎಂದರು.
ಸಂಸ್ಥೆಯ ಗೌರವಾಧ್ಯಕ್ಷರಾದ ಅಭಯಚಂದ್ರ ಜೈನ್ ದೇಶ ಭಾಷೆಗಳ ರಕ್ಷಣೆ ನಮ್ಮ ಕರ್ತವ್ಯ ಎಂದರು. ಎನ್‌ಸಿಸಿ ವಿದ್ಯಾರ್ಥಿಗಳು ಕವಾಯತಿನೊಂದಿಗೆ ಕಾರ್ಯಕ್ರಮ ಪ್ರಾರಂಭಗೊಂಡಿತು. ವೇದಿಕೆಯಲ್ಲಿ ಎಕ್ಸಲೆಂಟ್ ಮೂಡುಬಿದಿರೆಯ ಕಾರ್ಯದರ್ಶಿ ರಶ್ಮಿತಾ ಜೈನ್, ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರದೀಪ್ ಕುಮಾರ್ ಶೆಟ್ಟಿ, ಮುಖ್ಯೋಪಾಧ್ಯಾಯರಾದ ಶಿವಪ್ರಸಾದ್ ಭಟ್ ಉಪಸ್ಥಿತರಿದ್ದರು. ಸಂಸ್ಥೆಯ ಉಪನ್ಯಾಸಕಿ ಕು. ಪ್ರಿಯಾಂಕ ಸ್ವಾಗತಿಸಿ, ಡಾ. ಶೃತಿ ಅತಿಥಿಗಳನ್ನು ಪರಿಚಯಿಸಿದರು. ಕು. ಪ್ರಮೀಳಾ ಪಿಂಟೋ ವಂದಿಸಿದರು. ಉಪಮುಖ್ಯೋಪಾಧ್ಯಾಯ ಜಯಶೀಲ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here