ಮೂಡುಬಿದಿರೆ : ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್ಮೆಂಟ್, ಮೂಡುಬಿದಿರೆ ಸಂಸ್ಥೆಯಲ್ಲಿ ನಡೆಯಲಿರುವ ಡಿಪ್ಲೊಮಾ ಇನ್ ಕೋ-ಆಪರೇಟಿವ್ ಆಡಿಟ್ ತರಬೇತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಸಹಕಾರ ಕ್ಷೇತ್ರದಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳಿಗೆ ಈ ತರಬೇತಿ ಉತ್ತಮ ಅವಕಾಶವಾಗಿದ್ದು, ಪ್ರವೇಶಾತಿಗೆ ನವೆಂಬರ್ 14 ಕೊನೆಯ ದಿನವಾಗಿದೆ.
ಖಾಸಗಿ ಅಭ್ಯರ್ಥಿಗಳಿಗೆ ಪ್ರವೇಶ ಶುಲ್ಕ ಅನ್ವಯವಾಗಲಿದ್ದು, ಬಿಪಿಎಲ್, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಪ್ರವೇಶಾತಿ ಶುಲ್ಕದಿಂದ ಸಂಪೂರ್ಣ ವಿನಾಯಿತಿ ನೀಡಲಾಗಿದೆ.
ಸಹಕಾರ ಸಂಸ್ಥೆಗಳಲ್ಲಿ ಲೆಕ್ಕಪರಿಶೋಧಕರಾಗಲು ಅವಕಾಶ!
ಈ ತರಬೇತಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ಅಭ್ಯರ್ಥಿಗಳಿಗೆ ಸರ್ಕಾರದಿಂದ ಪರವಾನಗಿ ನೀಡಲಾಗುತ್ತದೆ. ಪರವಾನಗಿ ಪಡೆದ ಅಭ್ಯರ್ಥಿಗಳು ವಿವಿಧ ಸಹಕಾರ ಸಂಸ್ಥೆಗಳಲ್ಲಿ ಲೆಕ್ಕಪರಿಶೋಧಕರಾಗಿ ಕಾರ್ಯನಿರ್ವಹಿಸಲು ಅವಕಾಶವಿದೆ. ಈ ಮೂಲಕ ಸಹಕಾರ ಕ್ಷೇತ್ರದಲ್ಲಿ ಉದ್ಯೋಗ ಹಾಗೂ ಸ್ವಯಂ ಉದ್ಯೋಗದ ಅವಕಾಶಗಳನ್ನು ಪಡೆದುಕೊಳ್ಳಬಹುದಾಗಿದೆ.
ತರಬೇತಿ, ಪ್ರವೇಶಾತಿ ಹಾಗೂ ಇತರ ಮಾಹಿತಿಗಾಗಿ ಆಸಕ್ತರು 7022429440, 8971361396 ಹಾಗೂ 7259729104 ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಬಹುದು ಎಂದು ಸಂಸ್ಥೆಯ ಪ್ರಾಂಶುಪಾಲರ ಕಚೇರಿ ಪ್ರಕಟಣೆ ತಿಳಿಸಿದೆ.

