ಬೆಳ್ತಂಗಡಿ: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಫಲಿತಾಂಶ ಹೊರಬಿದ್ದಿದ್ದು, ಇಲ್ಲಿನ ಗುರುವಾಯನಕೆರೆಯ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅದ್ಭುತ ಸಾಧನೆಗಳನ್ನು ಮಾಡಿದ್ದಾರೆ. ಅನುಪ್ರಿಯ 594 ಅಂಕಗಳೊಂದಿಗೆ ತಾಲೂಕಿಗೆ ಪ್ರಥಮ ಮತ್ತು ರಾಜ್ಯಕ್ಕೆ ಐದನೇಯ ಸ್ಥಾನ ಪಡೆದಿದ್ದಾರೆ. ಆಶ್ರಿತ್ ಜೈನ್ 592 ಅಂಕಗಳೊಂದಿಗೆ ತಾಲೂಕಿಗೆ ದ್ವಿತೀಯ ಮತ್ತು ರಾಜ್ಯಕ್ಕೆ ಏಳನೇ ಸ್ಥಾನ ಪಡೆದಿದ್ದಾರೆ. ಧನ್ವಿ ಭಟ್, ತನ್ಮಯಿ ಶ್ಯಾನುಭಾಗ್, ಕೃತಿಕಾ ಸಿ.ಬಿ. 591 ಅಂಕಗಳೊಂದಿಗೆ ರಾಜ್ಯಕ್ಕೆ ಹತ್ತನೇ ಸ್ಥಾನ ಪಡೆದಿದ್ದಾರೆ. ಎಕ್ಸೆಲ್ ಪದವಿ ಪೂರ್ವ ಕಾಲೇಜಿನಿಂದ ಪರೀಕ್ಷೆ ಬರೆದ 455 ವಿದ್ಯಾರ್ಥಿಗಳಲ್ಲಿ 359 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 96 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ಅದ್ಭುತ ಸಾಧನೆ ತೋರಿರುವ ವಿದ್ಯಾರ್ಥಿಗಳಿಗೆ ಕಾಲೇಜಿನ ವತಿಯಿಂದ ಸನ್ಮಾನಿಸಲಾಯಿತು. ಕಾಲೇಜಿನ ವಿದ್ಯಾರ್ಥಿ ಸುಮಂತ್ ಕುಮಾರ್ ಜೈನ್, ಕಾರ್ಯದರ್ಶಿ ಅಭಿರಾಮ್ ಬಿಎಂ, ಪ್ರಾಂಶುಪಾಲ ಡಾ ನವೀನ್ ಕುಮಾರ್ ಮರಿಕೆ, ನಾವೂರು ಕ್ಲಿನಿಕ್‍ನ ವೈದ್ಯ ಡಾ ಪ್ರದೀಪ್ ನಾವೂರು, ಕಿಟ್ಟೆಲ್ ಕಾಲೇಜಿನ ಪ್ರಾಂಶುಪಾಲ ವಿಠ್ಠಲ ಅಬೂರ ಮತ್ತಿತರರು ಉಪಸ್ಥಿತರಿದ್ದರು.