ಕಾರ್ಕಳ: ಬೋಳ ಗ್ರಾಮದಲ್ಲಿ ಭಾರೀ ಪ್ರಮಾಣದಲ್ಲಿ ಅಕ್ರಮವಾಗಿ ದಾಸ್ತಾನಿರಿಸಿದ್ದ ಮದ್ಯದ ಬಾಕ್ಸ್‌ಗಳನ್ನು ಅಬಕಾರಿ ಇಲಾಖೆ ದಾಳಿ ಮಾಡಿದೆ. ಹಾಗೂ ಮದ್ಯದ ಬಾಟಲಿಗಳನ್ನು ವಶಕ್ಕೆ ಪಡೆದುಕೊಂಡಿದೆ. ಈ ಘಟನೆ ಇಂದು (ಗುರುವಾರ ನ.14) ನಡೆದಿದೆ.
ಅಬಕಾರಿ ಉಪ ಆಯುಕ್ತೆ ಬಿಂದು ಅವರ ನೇತೃತ್ವದಲ್ಲಿ ಈ ದಾಳಿ ನಡೆದಿದೆ. ದುಬಾರಿ ಮೌಲ್ಯದ ಮದ್ಯದ ಬಾಟಲಿಗಳು ಬಾಕ್ಸ್ ಸಮೇತ ದಾಸ್ತಾನು ಮಾಡಲಾಗಿತ್ತು. 200 ಕ್ಕೂ ಹೆಚ್ಚು ಬಾಕ್ಸ್‌ಗಳನ್ನು ವಶಕ್ಕೆ ಪಡೆಯಲಾಗಿದ್ದು, ಇದು ನಕಲಿ ಮದ್ಯವೋ, ಅಸಲಿ ಮದ್ಯವೋ ಎನ್ನುವುದು ತನಿಖೆಯಿಂದ ತಿಳಿದು ಬರಬೇಕಿದೆ.
ಬೋಳ:ಅಬಕಾರಿ ದಾಳಿ, ಅಕ್ರಮ ದಾಸ್ತಾನಿರಿಸಿದ್ದ 200 ಕ್ಕೂ ಅಧಿಕ ಮದ್ಯದ ಬಾಕ್ಸ್‌ಗಳು ವಶಕ್ಕೆ
RELATED ARTICLES