ಡಾ. ಚಂದ್ರಶೇಖರ್ ಅವರ ಹೆಸರು ಕೈಬಿಟ್ಟಿರುವುದು ಖಂಡನೀಯ : ವಿ ಸುನಿಲ್ ಕುಮಾರ್

0
21

ಉಡುಪಿ : ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಘೋಷಣೆಯ ಸಂದರ್ಭದಲ್ಲಿ ಉಡುಪಿಯ ಆದರ್ಶ ಆಸ್ಪತ್ರೆಯ ಮುಖ್ಯಸ್ಥರಾದ ಡಾ. ಚಂದ್ರಶೇಖರ್ ಅವರ ಹೆಸರನ್ನು ಮೊದಲ ಪಟ್ಟಿಯಲ್ಲಿ ಘೋಷಿಸಿ, ಬಳಿಕ ಕೈಬಿಟ್ಟು ಮತ್ತೊಬ್ಬರನ್ನು ಆಯ್ಕೆ ಮಾಡಿರುವುದು ತೀವ್ರ ಖಂಡನೀಯ.

ವೈದ್ಯಕೀಯ ಕ್ಷೇತ್ರದ ಜೊತೆಗೆ ಹಲವು ಸಾಮಾಜಿಕ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡು, ಸದಾ ಜನರ ಧ್ವನಿಯಾಗಿ, ಸಮಾಜದ ಹಿತಕ್ಕಾಗಿ ಶ್ರಮಿಸುತ್ತಿರುವ ಡಾ. ಚಂದ್ರಶೇಖರ್ ಅವರ ಸೇವೆಯನ್ನು ಕಡೆಗಣಿಸಿರುವುದು ಅತ್ಯಂತ ನೋವಿನ ಸಂಗತಿ. ಇಂತಹ ಗೌರವಾನ್ವಿತ ವ್ಯಕ್ತಿತ್ವಕ್ಕೆ ರಾಜ್ಯ ಸರ್ಕಾರ ಅಪಮಾನ ಮಾಡಿದಂತಾಗಿದೆ.

ಸರ್ಕಾರದ ಈ ನಡೆಗೆ ತೀವ್ರ ಆಕ್ರೋಶ ಮತ್ತು ಉಗ್ರ ಖಂಡನೆಯನ್ನು ವ್ಯಕ್ತಪಡಿಸುತ್ತೇನೆ ಎಂದು ವಿ ಸುನಿಲ್ ಕುಮಾರ್ ಹೇಳಿದರು.