ಮಂಗಳೂರಿನ MRPL ಭಾಗದಲ್ಲಿ ಸ್ಫೋಟ

0
66

ಮಂಗಳೂರು: ನಗರದ MRPL ಭಾಗದಲ್ಲಿ ಭಾರೀ ಸ್ಫೋಟದ ಸದ್ದು ಕೇಳಿಬಂದಿದ್ದು, ಜೋಕಟ್ಟೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.

ಸ್ಫೋಟದ ತೀವ್ರತೆಗೆ ಜೋಕಟ್ಟೆ ಪಂಚಾಯತ್ ಕಟ್ಟಡ ಸೇರಿದಂತೆ ಹಲವು ಮನೆಗಳು ಕಂಪಿಸಿದ ಅನುಭವವಾಗಿದ್ದು, ಕೆಲವು ಮನೆಗಳ ಬಾಗಿಲು ಹಾಗೂ ಕಿಟಕಿಗಳಿಗೆ ಹಾನಿಯಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಸ್ಫೋಟದ ಬಳಿಕ ಆಕಾಶದಲ್ಲಿ ದಟ್ಟ ಹೊಗೆ ಕಾಣಿಸಿಕೊಂಡಿದೆ ಎಂದು ತಿಳಿದುಬಂದಿದೆ.