ಮಂಗಳೂರು : ಜುಲೈ 25ರಂದು ಶಾಲೆ, ಪದವಿ ಪೂರ್ವ ಕಾಲೇಜಿಗೆ ರಜೆ ಘೋಷಿಸಿ ಮಂಗಳೂರು ತಹಶೀಲ್ದಾರ್ ಆದೇಶ ಹೊರಡಿಸಿದ್ದಾರೆ.
ದಕ ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗೃತ ಕ್ರಮವಾಗಿ ತಹಸೀಲ್ದಾರ್ ರಜೆ ಘೋಷಣೆ ಮಾಡಿದ್ದಾರೆ. ಜಿಲ್ಲೆಯ ಉಳಿದ ತಾಲೂಕುಗಳಿಗೂ ರಜೆ ಘೋಷಣೆ ಮಾಡುವ ಸಾಧ್ಯತೆ ಇದೆ.
ಹಾಗೇ ನದಿ, ಸಮುದ್ರ ತೀರ ಪ್ರದೇಶಕ್ಕೆ ತೆರಳದಂತೆ ಸೂಚಿಸಿದ್ದಾರೆ. ಅಲ್ಲದೇ ಮೀನುಗಾರರು ಮೀನುಗಾರಿಕೆಗೆ ತೆರಳದಂತೆ ಎಚ್ಚರಿಕೆ ನೀಡಿದ್ದಾರೆ.