ಮಂಗಳೂರು,ನ.21;ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ಪಠ್ಯೇತರ ಚಟುವಟಿಕೆ ಗಳು ಪೂರಕ ಎಂದು ಶಾಸಕ ವೇದ ವ್ಯಾಸ ಕಾಮತ್ ತಿಳಿಸಿದ್ದಾರೆ.
ಭಾರತೀಯರೆಡ್ ಕ್ರಾಸ್ ಸಂಸ್ಥೆ ದಕ್ಷಿಣ ಕನ್ನಡ ಜಿಲ್ಲಾ ಘಟಕ , ಬೆಸೆಂಟ್ ಮಹಿಳಾ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕ ಹಾಗೂ ಪರಿಸರ ಅದ್ಯಯನ ಕೇಂದ್ರ ನೆಲ್ಲಿಗುಡ್ಡೆ ಇದರ ಸಹಭಾಗಿತ್ವದಲ್ಲಿ ನಗರದ ಹ್ಯಾಟ್ ಹಿಲ್ ನ ಇಂದಿರಾ ಪ್ರಿಯದರ್ಶಿನಿ ಉದ್ಯಾನವನದಲ್ಲಿ ( ವನಿತಾ ಪಾರ್ಕ್ ) ಸ್ವಚ್ಛತಾ ಕಾರ್ಯಕ್ರಮ ವನ್ನುದ್ದೇಶಿಸಿ ಮಾತನಾಡುತ್ತಿದ್ದರು.
ರೆಡ್ ಕ್ರಾಸ್, ರಾಷ್ಟ್ರೀಯ ಸೇವಾ ಯೋಜನೆ ಯಲ್ಲಿ ವಿದ್ಯಾರ್ಥಿಗಳು ತಮ್ಮನ್ನು ತೊಡಗಿಸಿಕೊಂಡು ಸಮಾಜವನ್ನು ಹೆಚ್ಚು ಅರ್ಥ ಮಾಡಿಕೊಳ್ಳಲುಮತ್ತು ತಮ್ಮ ಅನುಭವ ಜ್ಞಾನ ವನ್ನು ವೃದ್ಧಿ ಸಿ ಕೊಳ್ಳಲು ಸಹಕಾರಿ ಯಾಗಿದೆ ಎಂದು ವೇದವ್ಯಾಸ ಕಾಮತ್ ತಿಳಿಸಿದ್ದಾರೆ.
ಮಂಗಳೂರು ಮಹಾನಗರ ಪಾಲಿಕೆಯ ಎಲ್ಲಾ ಪಾರ್ಕ್ ಗಳನ್ನು ನವೀಕರಣ ಗೊಳಿಸಲು ಮಹಾನಗರ ಪಾಲಿಕೆ ಮತ್ತು ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಮೂಲಕ ಯೋಜನೆ ರೂಪಿಸಲು ಅವಕಾಶ ವಿದೆ ಈ ನಿಟ್ಟಿನಲ್ಲಿ ಸಹಕಾರ ನೀಡುವುದಾಗಿ ತಿಳಿಸಿದರು.
ಮಹಾನಗರ ಪಾಲಿಕೆ ಸದಸ್ಯೆ ಸಂಧ್ಯಾ ಆಚಾರ್ , ಬೆಸೆಂಟ್ ಮಹಿಳಾ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕದ ನಿರ್ದೇಶಕಿ ಯಾದ ದೀಕ್ಷಿತಾ,ದ.ಕ ಜಿಲ್ಲಾ ಕಾರ್ಯ ನಿರತ ಪತ್ರ ಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಮಂಗಳೂರು ವಿಶ್ವ ವಿದ್ಯಾನಿಲಯದ ರಾಜಕೀಯ ಶಾಸ್ತ್ರದ ಪ್ರೊಫೆಸರ್ ಡಾ.ದಯಾನಂದ,ಖ್ಯಾತ ಕಬಡ್ಡಿ ಆಟಗಾರ ಭರತ್ ಕುಮಾರ್ ,ಇಂಡಿಯನ್ ರೆಡ್ ಕ್ರಾಸ್ ಸೊಸೈಟಿಯ ಪ್ರತಿನಿಧಿಗಳಾದ ಪ್ರಭಾಕರ ಶರ್ಮ, ರವೀಂದ್ರನಾಥ ಉಚ್ಚಿಲ್ ಉಪಸ್ಥಿತ ರಿದ್ದರು.ಭಾಸ್ಕರ್ ರೈ ಕಟ್ಟ ಕಾರ್ಯ ಕ್ರಮ ನಿರೂಪಿಸಿದರು. ಪುಷ್ಪರಾಜ್ ಬಿ.ಎನ್. ವಂದಿಸಿದರು,ಬೆಸೆಂಟ್ ಮಹಿಳಾ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕದ ಕಾರ್ಯದರ್ಶಿ ಶ್ರೀಜಾ ಶಿಬಿರಾರ್ಥಿಗಳ ಪರವಾಗಿ ಅನಿಸಿಕೆ ವ್ಯಕ್ತ ಪಡಿಸಿದರು.
ಬಳಿಕ ಬೆಸೆಂಟ್ ಮಹಿಳಾ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕದ ವಿದ್ಯಾರ್ಥಿನಿಯರು ನಗರದ ಹ್ಯಾಟ್ ಹಿಲ್ ನ ಇಂದಿರಾ ಪ್ರಿಯದ ರ್ಶಿನಿ ಉದ್ಯಾನವ ನದಲ್ಲಿ ( ವನಿತಾ ಪಾರ್ಕ್ ) ಸ್ವಚ್ಛತಾ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

Leave a Reply

Your email address will not be published. Required fields are marked *