ಶ್ರೀ ಸತ್ಯಸಾಯಿ ಸೇವಾ ಸಮಿತಿ ಉಡುಪಿ ವತಿಯಿಂದ ಪೇತ್ರಿಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೇತ್ರ ತಪಾಸಣೆ ಶಿಬಿರವನ್ನು ಶ್ರೀ ಸತ್ಯಸಾಯಿ ಸೇವಾ ಸಮಿತಿ ನೀಲಾವರ ಮತ್ತು ಪಾರ್ವತಿ ಮಹಾಬಲ ಶೆಟ್ಟಿ ನೇತ್ರ ಚಿಕಿತ್ಸಾಲಯ ಮುದ್ದೂರು ಇವರ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಶ್ರೀ ಸತ್ಯಸಾಯಿ ಸೇವಾ ಸಮಿತಿ ಉಡುಪಿ ಜಿಲ್ಲೆಯ ಅಧ್ಯಕ್ಷರಾದ ಆನಂದ್ ಉದ್ಘಾಟಿಸಿದರು. ಡಾ. ರವೀಂದ್ರ ಹೆಬ್ಬಾರ್ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಚೇರ್ಕಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ನಾರಾಯಣ ನಾಯ್ಕ್ ರವರು ನಾಲ್ಕು ಮಾತುಗಳನ್ನಾಡಿದರು. ನೇತ್ರಕ್ಕೆ ಸಂಬಂಧಿಸಿದಂತೆ ಪಾರ್ವತಿ ಮಹಾಬಲ ಶೆಟ್ಟಿ ಆಸ್ಪತ್ರೆಯ ವೈದ್ಯರು ಮಾಹಿತಿಯನ್ನು ಒದಗಿಸಿದರು. ಫಲಾನುಭವಿಗಳಾಗಿ 152 ರೋಗಿಗಳು ಭಾಗವಹಿಸಿದರು.

