ಮಣಿಪಾಲದ ಎಂ.ಐ.ಸಿ ಕ್ಯಾಂಪಸ್ ನಲ್ಲಿರುವ ರೇಡಿಯೋ ಮಣಿಪಾಲ್ ಸಮುದಾಯ ಬಾನುಲಿ ಕೇಂದ್ರದಲ್ಲಿ ಕಣ್ಣಿನ ಆರೋಗ್ಯ ಕುರಿತು ವಿಶೇಷ ಮಾಹಿತಿ ಕಾರ್ಯಕ್ರಮ ಪ್ರಸಾರವಾಗಲಿದೆ.
ಮಣಿಪಾಲ್ ಕಾಲೇಜ್ ಆಫ್ ಹೆಲ್ತ್ ಪ್ರೊಫೆಶನ್ಸ್ ನ ಆಪ್ತೊಮೆಟ್ರಿ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿರುವ ಪ್ರೀತಿ ನಾಯ್ಕ್ ಕಣ್ಣಿನ ಆರೋಗ್ಯದ ಕುರಿತು ವಿಶೇಷ ಮಾಹಿತಿ ನೀಡಲಿದ್ದಾರೆ.
ಇದು ದಶಂಬರ್ ತಿಂಗಳ 27 ರಂದು ಶನಿವಾರ ಸಂಜೆ 6ಕ್ಕೆ ಪ್ರಸಾರವಾಗಲಿದೆ. ಮತ್ತು ಭಾನುವಾರ ಮಧ್ಯಾಹ್ನ 2 ಗಂಟೆಗೆ ಮರುಪ್ರಸಾರವಾಗಲಿದೆ.
ರೇಡಿಯೊ ಮಾತ್ರವಲ್ಲದೆ ಆಂಡ್ರಾಯ್ಡ್ ಫೋನ್ ನ https://play.google.com/store/apps/details?id=com.atc.radiomanipal
ಮತ್ತು ಐಫೋನ್ ನ
https://itunes.apple.com/app/id6447231815 ಲಿಂಕ್ ಮೂಲಕ ರೇಡಿಯೊ ಮಣಿಪಾಲ್ ಆಪ್ ಡೌನ್ಲೋಡ್ ಮಾಡಿ ಈ ಕಾರ್ಯಕ್ರಮ ಕೇಳಬಹುದಾಗಿದೆ ಎಂದು ಮಣಿಪಾಲ ಮಾಹೆಯ ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್ ಕಮ್ಯುನಿಕೇಶನ್ ಕ್ಯಾಂಪಸ್ ನಲ್ಲಿರುವ ರೇಡಿಯೊ ಮಣಿಪಾಲ್ ಸಮುದಾಯ ಬಾನುಲಿ ಕೇಂದ್ರದ ಪ್ರಕಟಣೆ ತಿಳಿಸಿದೆ.

