ಕೋಲಾರ: ಪತ್ನಿಯನ್ನು ಹತ್ಯೆಗೈದು ಪರಾರಿಯಾಗಿದ್ದ ಪಾತಕಿ ಪೊಲೀಸರಿಂದ ತಪ್ಪಿಸಿಕೊಳ್ಳಲೆಂದು ಕಟ್ಟಡದಿಂದ ಜಿಗಿದು ಸಾವನ್ನಪ್ಪಿದ್ದಾನೆ. ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಪತ್ನಿಯನ್ನು ಕೊಂದ ಆರೋಪಿ, ಕೋಲಾರದಲ್ಲಿ ಸಾವನ್ನಪ್ಪಿದ್ದಾನೆ.
ಕೊಲೆ ನಡೆದ ಐದು ದಿನಗಳ ಬಳಿಕ ಆರೋಪಿ ತಬ್ರೇಝ್ ಪಾಷಾ ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಸಾವನ್ನಪ್ಪಿದ್ದಾನೆ.
ಫೇಸ್ಬುಕ್ ಲೈವ್ ಮಾಡುತ್ತಲೇ ಪತ್ನಿಯ ಹತ್ಯೆ ಮಾಡಿದ್ದ ತಬ್ರೇಝ್, ಪತ್ನಿ ಫಾತಿಮಾಳಿಗೆ ಚೂರಿಯಿಂದ ಇರಿದು ಕೊಂದಿದ್ದ. ಬೆಂಗಳೂರಿನ ಚಾಮರಾಜಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿತ್ತು.