ಕುಂದಾಪುರ : ಅತಿಯಾದ ಸಾಲಬಾಧೆ, ಮರ್ಯಾದೆಗೆ ಅಂಜಿ ಒಂದೇ ಕುಟುಂಬದ ಮೂವರು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕುಂದಾಪುರದ ತೆಕ್ಕಟ್ಟೆಯಲ್ಲಿ ನಡೆದಿದ್ದು, ಅಪ್ಪ, ಮಗ ಮೃತಪಟ್ಟಿದ್ದರೆ, ತಾಯಿಯ ಸ್ಥಿತಿ ಗಂಭೀರವಾಗಿದೆ
ಮೃತರನ್ನು ಕಂಚುಗಾರುಬೆಟ್ಟು ನಿವಾಸಿ ಮಾಧವ ದೇವಾಡಿಗ (56) ಹಾಗೂ ಗಿರೀಶ್ ದೇವಾಡಿಗ (22) ಎಂದು ಗುರುತಿಸಲಾಗಿದೆ.
ಇನ್ನು ಪತ್ನಿ ತಾರಾ ದೇವಾಡಿಗ ಸ್ಥಿತಿ ಗಂಭೀರವಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮಾಧವ ಎಂಬುವವರು ಪೆಟ್ರೋಲ್ ಬಂಕ್ ವೊಂದರಲ್ಲಿ ಕೆಲಸ ಮಾಡುತ್ತಿದ್ದು, ಮೈತುಂಬ ಸಾಲ ಮಾಡಿಕೊಂಡಿದ್ದರು, ಇನ್ನೊಂದೆಡೆ ಸಾಲ ಮರುಪಾವತಿ ಮಾಡುವಂತೆ ಬ್ಯಾಂಕ್ ಗಳು ನೋಟಿಸ್ ನೀಡಿದ್ದರು, ಇದರಿಂದ ಮರ್ಯಾದೆಗೆ ಅಂಜಿ ಡೆತ್ ನೋಟ್ ಬರೆದಿಟ್ಟು ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಮಾಧವ ಹಾಗೂ ಗಿರೀಶ್ ಮೊದಲು ಆತ್ಮಹತ್ಯೆಗೆ ಶರಣಾಗಿದ್ದರು, ಪತಿ ಹಾಗೂ ಮಗ ಆತ್ಮಹತ್ಯೆ ಮಾಡಿಕೊಂಡಿರುವ ವಿಚಾರ ತಿಳಿದು ಅದೇ ಬಾವಿಗೆ ತಾರಾ ಕೂಡ ಬಾವಿಗೆ ಹಾರಿದ್ದು, ಈ ವೇಳೆ ಕಿರುಚಾಟ ಶಬ್ದ ಕೇಳಿ ಸ್ಥಳೀಯರು ರಕ್ಷಣೆಗೆ ಧಾವಿಸಿದ್ದಾರೆ.
ಅದರಂತೆ ಕೂಡಲೇ ತಾರಾ ಅವರನ್ನು ರಕ್ಷಣೆ ಮಾಡಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ಚಿಕಿತ್ಸೆ ಪಡೆಯುತ್ತಿದ್ದು, ಸ್ಥಿತಿ ಗಂಭೀರವಾಗಿದೆ. ಇನ್ನು ಕೂಡಲೇ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಮೃತದೇಹವನ್ನು ಮೇಲಕ್ಕೆ ಎತ್ತಲಾಗಿದೆ. ಈ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.