ಕನ್ನಡದ ಖ್ಯಾತ ನಿರೂಪಕಿ ಅಪರ್ಣಾ ಇನ್ನಿಲ್ಲ

0
625

ಬೆಂಗಳೂರು: ಮಸಣದ ಹೂವು ಚಿತ್ರದ ಮೂಲಕ ಬೆಳಕಿಗೆ ಬಂದ ಅಪರ್ಣಾ ಬಳಿಕ ಹತ್ತಾರು ಚಿತ್ರಗಳಲ್ಲಿ ನಟಿ, ಸಹನಟಿಯಾಗಿ ನಟಿಸಿದ್ದರು. ಬಳಿಕ ನಿರೂಪಣೆಯಲ್ಲೇ ಹೆಚ್ಚಾಗಿ ಗುರುತಿಸಿಕೊಂಡಿದ್ದ ಅಪರ್ಣಾ ಜನಮಾನಸದಲ್ಲಿ ಖ್ಯಾತಿ ಪಡೆದಿದ್ದರು.

90ರ ದಶಕದಲ್ಲಿ ಚಂದನ ವಾಹಿನಿಯಲ್ಲಿ ಮೂಡಿಬಂದ ಹಲವು ಕಾರ್ಯಕ್ರಮಗಳಲ್ಲಿ ನಿರೂಪಕಿಯಾಗಿ ಸೇವೆ ಸಲ್ಲಿಸಿದ್ದರು. ಇದಲ್ಲದೇ ವಿವಿಧ ಭಾರತಿಯಲ್ಲಿ ರೇಡಿಯೋ ಜಾಕಿಯಾಗಿ, 1998 ರಲ್ಲಿ ನಡೆದ ದೀಪಾವಳಿ ಕಾರ್ಯಕ್ರವೊಂದನ್ನು ಎಂಟು ಗಂಟೆಗಳ ನಿರೂಪಣೆ ಮಾಡಿ ದಾಖಲೆ ಬರೆದಿದ್ದರು. ಕಿರುತೆರೆಯಲ್ಲಿ ಮೂಡಲಮನೆ, ಮುಕ್ತ ಮುಂತಾದ ಧಾರಾವಾಹಿಗಳಲ್ಲಿ ನಟಿಸಿದ ಅವರು, 2013 ರಲ್ಲಿ ಬಿಗ್ ಬಾಸ್ ಕನ್ನಡದ ಮೊದಲ ಸೀಸನ್‌ನಲ್ಲಿ ಭಾಗವಹಿಸಿದ್ದರು. 2015ರಲ್ಲಿ ಸೃಜನ್ ಲೋಕೇಶ್ ನೇತೃತ್ವದಲ್ಲಿ ಆರಂಭವಾದ ‘ಮಜಾ ಟಾಕೀಸ್’ ಕಾರ್ಯಕ್ರಮದಲ್ಲಿ ವರಲಕ್ಷ್ಮಿ ಪಾತ್ರ ಮಾಡಿ ಜನಮೆಚ್ಚುಗೆಗೆ ಪಾತ್ರರಾಗಿದ್ದರು.

LEAVE A REPLY

Please enter your comment!
Please enter your name here