ಬ್ರಹ್ಮಾವರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರಾದ ಜಯಂತ್ ಅವರಿಗೆ ಬೀಳ್ಕೊಡುಗೆ ಸಮಾರಂಭ ಮತ್ತು ಸನ್ಮಾನ ಕಾರ್ಯಕ್ರಮವನ್ನು ಆಯೋಜಿಸಲಾಯಿತು.
ಅಶೋಕ್ ಮಾಳಬಾಗಿ ಪೊಲೀಸ್ ಉಪನಿರೀಕ್ಷಕರು ಬ್ರಹ್ಮಾವರ ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ, ಜಯಂತ್ ಅವರ ಸೇವೆಯನ್ನು ಸ್ಮರಿಸಿ ಗೌರವಿಸಲಾಯಿತು. ಅವರು ತಮ್ಮ ಸೇವಾ ಅವಧಿಯಲ್ಲಿ ಪೊಲೀಸ್ ಇಲಾಖೆಗೆ ಸಲ್ಲಿಸಿದ ಕೊಡುಗೆಗಳನ್ನು ಈ ಸಂದರ್ಭದಲ್ಲಿ ಪ್ರಶಂಸಿಸಲಾಯಿತು.
ಕಾರ್ಯಕ್ರಮದಲ್ಲಿ ಉದ್ಯಮಿ ಚೇತನ್ ಶೆಟ್ಟಿ, ಪೊಲೀಸ್ ಸಹಾಯಕ ಉಪನಿರೀಕ್ಷಕರಾದ ಶೇಖರ್ ನಾಯಕ್ ಹಾಗೂ ಕೃಷ್ಣಪ್ಪ ಉಪಸ್ಥಿತರಿದ್ದರು. ಜೊತೆಗೆ ಸಮಾಜ ಸೇವಕರಾದ ಸತೀಶ್ ಪೂಜಾರಿ ಕೀಳಂಜೆ ಹಾಗೂ ಪ್ರಸಿದ್ಧ ಮುಳುಗು ತಜ್ಞ ಈಶ್ವರ ಮಲ್ಪೆ ಕೂಡ ಭಾಗವಹಿಸಿದ್ದರು.
ಇದೇ ವೇಳೆ ಪೊಲೀಸ್ ಇಲಾಖೆಯ ಸಿಬ್ಬಂದಿ ವರ್ಗ ಮತ್ತು ಅವರ ಕುಟುಂಬಸ್ಥರು ಉಪಸ್ಥಿತರಿದ್ದು, ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಲಾಯಿತು.
ಜಯಂತ್ ಅವರಿಗೆ ಹಾರೈಕೆಗಳನ್ನು ತಿಳಿಸಿ, ಅವರ ಮುಂದಿನ ಸೇವಾ ಜೀವನಕ್ಕೆ ಶುಭಾಶಯಗಳನ್ನು ಕೋರಲಾಯಿತು.

