ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಬೀಳ್ಕೊಡುಗೆ ಸಮಾರಂಭ

0
6

ಯಾವುದೇ ವೃತ್ತಿ ಮೇಲು ಅಥವಾ ಕೀಳು ಅಲ್ಲ. ನಿಷ್ಕಾಮ ಕರ್ಮದಿಂದ ಕಾರ್ಯವನ್ನು ಪೂರೈಸಿದಾಗ ಭಗವಂತ ಅದಕ್ಕೆ ತಕ್ಕ ಪ್ರತಿಫಲವನ್ನು ನೀಡುತ್ತಾನೆ. ಪ್ರತಿಫಲವನ್ನು ಅಪೇಕ್ಷಿಸದ ಬದುಕು ಪ್ರೀತಿ ಮತ್ತು ಗೌರವವನ್ನು ಪಡೆದುಕೊಳ್ಳುತ್ತದೆ ಎಂದು ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಆಡಳಿತ ಮಂಡಳಿ ನಿರ್ದೇಶಕರಾದ ವತ್ಸಲ ರಾಜ್ಞೆ ನುಡಿದರು. ಅವರು ವಿವೇಕಾನಂದ ಪದವಿ ಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ನಡೆದ ಬೀಳ್ಕೊಡುಗೆ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.

ಸಂಸ್ಥೆಯಲ್ಲಿ ಸುಮಾರು 36 ವರ್ಷಗಳಿಂದ ಅಟೆಂಡರ್ ಆಗಿ ಕಾರ್ಯನಿರ್ವಹಿಸಿದ ಸತ್ಯನಾರಾಯಣ ಹಾಗೂ ಸುಮಾರು 25 ವರ್ಷ ವಿವೇಕಾನಂದ ಪಾಲಿಟೆಕ್ನಿಕ್ ವಿಭಾಗ ಹಾಗೂ ಐದು ವರ್ಷಗಳಿಂದ ವಿವೇಕಾನಂದ ಪದವಿಪೂರ್ವ ಕಾಲೇಜಿನ ಭೌತಶಾಸ್ತ್ರ ಪ್ರಯೋಗಾಲಯದಲ್ಲಿ ಸಹಾಯಕರಾಗಿ ಸೇವೆ ಸಲ್ಲಿಸಿದ ಲೀಲಾವತಿ ಇವರಿಗೆ ಸಂಸ್ಥೆಯ ವತಿಯಿಂದ ಬೀಳ್ಕೊಡುಗೆ ಸಮಾರಂಭವನ್ನು ಏರ್ಪಡಿಸಲಾಯಿತು.

ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ದೇವಿಚರಣ್ ರೈ ಎಂ. ಹಾಗೂ ಉಪನ್ಯಾಸಕ, ಉಪನ್ಯಾಸಕೇತರ ವೃಂದದವರು ಭಾಗಿಯಾಗಿದ್ದರು.