Friday, March 21, 2025
Homeಉಡುಪಿಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿ., ಉಡುಪಿ ಸಂಘದಲ್ಲಿ ಸೇವಾ ನಿವೃತ್ತಿ ಹೊಂದಿದ ಸಿಬ್ಬಂದಿಗಳಿಗೆ ಬೀಳ್ಕೊಡುಗೆ...

ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿ., ಉಡುಪಿ ಸಂಘದಲ್ಲಿ ಸೇವಾ ನಿವೃತ್ತಿ ಹೊಂದಿದ ಸಿಬ್ಬಂದಿಗಳಿಗೆ ಬೀಳ್ಕೊಡುಗೆ ಕಾರ್ಯಕ್ರಮ

ಉಡುಪಿಯ ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸÊಾಟಿಯಲ್ಲಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಶಾಖಾ ವ್ಯವಸ್ಥಾಪಕರಾದ ನಯನಾ ಆಶಾಮಣಿ, ದಾಮೋದರ್, ಶೆರ್ಲಿನ್ ಕರ್ಕಡ ಹಾಗೂ ಸಿಬ್ಬಂದಿ ರವಿ ಬಿ ಇವರ ಬೀಳ್ಕೊಡುಗೆ ಕಾರ್ಯಕ್ರಮವು ಉಡುಪಿ ಅಜ್ಜರಕಾಡು ಪುರಭವನ ಮಿನಿಹಾಲ್‌ನಲ್ಲಿ ಜರಗಿತು.
ಕುಂದಾಪುರ ಉಪವಿಭಾಗದ ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ಸುಕನ್ಯಾ, ನಿವೃತ್ತ ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ಅರುಣ್ ಕುಮಾರ್ ಎಸ್.ವಿ ಸಮ್ಮುಖದಲ್ಲಿ ಬೀಳ್ಕೊಡುಗೆ ಕಾರ್ಯಕ್ರಮ ನೆರವೇರಿತು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಜಯಕರ ಶೆಟ್ಟಿ ಇಂದ್ರಾಳಿ, ಉಪಾಧ್ಯಕ್ಷರಾದ ಜಾರ್ಜ್ ಸಾಮ್ಯುವೆಲ್, ಆಡಳಿತ ಮಂಡಳಿ ಸದಸ್ಯರಾದ ಎಲ್. ಉಮಾನಾಥ, ಪುರುಷೋತ್ತಮ ಪಿ. ಶೆಟ್ಟಿ, ಸೈಯ್ಯದ್ ಅಬ್ದುಲ್ ರಜಾಕ್, ವಿನಯ ಕುಮಾರ್ ಟಿ.ಎ., ಮನೋಹರ ಎಸ್. ಶೆಟ್ಟಿ, ಸಾಧು ಸಾಲ್ಯಾನ್, ಸದಾಶಿವ ನಾಯ್ಕ್, ಜಯಾ ಶೆಟ್ಟಿ , ಗಾಯತ್ರಿ ಎಸ್. ಭಟ್, ಪ್ರಧಾನ ವ್ಯವಸ್ಥಾಪಕರಾದ ರಾಜೇಶ್ ವಿ. ಶೇರಿಗಾರ್, ಸಹಾಯಕ ಪ್ರಧಾನ ವ್ಯವಸ್ಥಾಪಕರಾದ ಪ್ರವೀಣ್ ಕುಮಾರ್ ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular