40 ವರ್ಷಗಳ ಹಳೆಯ ಟಿಕೆಟ್ ಬುಕ್ಕಿಂಗ್ ವ್ಯವಸ್ಥೆಗೆ ವಿದಾಯ; ಭಾರತೀಯ ರೈಲ್ವೆಯಲ್ಲಿ ಹೊಸ ಡಿಜಿಟಲ್ ಕ್ರಾಂತಿ

0
82

ಭಾರತೀಯ ರೈಲ್ವೆ ಇಲಾಖೆ ತನ್ನ ಪ್ರಯಾಣಿಕರ ಮೀಸಲಾತಿ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ ತಂದಿದೆ. ಸುಮಾರು 40 ವರ್ಷಗಳಿಂದ ಬಳಸಲಾಗುತ್ತಿದ್ದ ಹಳೆಯ ಪ್ರಯಾಣಿಕರ ಮೀಸಲಾತಿ ವ್ಯವಸ್ಥೆ (PRS) ಅನ್ನು ಬದಲಿಸಿ ಸಂಪೂರ್ಣ ಹೊಸ ಡಿಜಿಟಲ್ ವ್ಯವಸ್ಥೆಯನ್ನು ಜಾರಿಗೆ ತರಲು ಮುಂದಾಗಿದೆ.

ಭಾರತೀಯ ರೈಲ್ವೆ ವಿಶ್ವದ ನಾಲ್ಕನೇ ಅತಿ ದೊಡ್ಡ ರೈಲ್ವೆ ಜಾಲವಾಗಿದ್ದು, ಪ್ರತಿದಿನ ಸುಮಾರು 2.5 ಕೋಟಿ ಜನರನ್ನು ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಸಾಗಿಸುತ್ತದೆ. ಇತ್ತೀಚಿನ ವರ್ಷಗಳಲ್ಲಿ ಆನ್‌ಲೈನ್ ಟಿಕೆಟ್ ಬುಕ್ಕಿಂಗ್ ಪ್ರಮಾಣ ಹೆಚ್ಚಾಗಿ ಶೇಕಡಾ 80 ರಷ್ಟು ಟಿಕೆಟ್‌ಗಳು ಡಿಜಿಟಲ್ ಮೂಲಕವೇ ಬುಕ್ ಆಗುತ್ತಿವೆ.

1986ರಲ್ಲಿ ಆರಂಭಗೊಂಡಿದ್ದ ಹಳೆಯ PRS ವ್ಯವಸ್ಥೆ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದು, ಈಗಿನ ಡಿಜಿಟಲ್ ಬೇಡಿಕೆಗೆ ತಕ್ಕಂತೆ ಹಲವು ತಾಂತ್ರಿಕ ಸಮಸ್ಯೆಗಳನ್ನು ಎದುರಿಸುತ್ತಿತ್ತು. ಇದನ್ನು ಗಮನದಲ್ಲಿಟ್ಟುಕೊಂಡು ರೈಲ್ವೆ ಇಲಾಖೆ ಹೊಸ ಡಿಜಿಟಲ್ ವ್ಯವಸ್ಥೆಯನ್ನು ರೂಪಿಸಿದೆ.

ಹೊಸ ವ್ಯವಸ್ಥೆಯಲ್ಲಿ ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನವನ್ನು ಬಳಸಲಾಗುತ್ತಿದ್ದು, ಇದರಿಂದ ಟಿಕೆಟ್ ಬುಕ್ಕಿಂಗ್, ರದ್ದುಪಡಿಸುವಿಕೆ ಹಾಗೂ ಸೀಟ್ ಕನ್‌ಫರ್ಮೇಶನ್ ಪ್ರಕ್ರಿಯೆಗಳು ಹೆಚ್ಚು ವೇಗವಾಗಿ ಮತ್ತು ನಿಖರವಾಗಿ ನಡೆಯಲಿವೆ ಎಂದು ತಿಳಿಸಲಾಗಿದೆ.

ಈ ಹೊಸ ವ್ಯವಸ್ಥೆ ಇದೇ ಆಗಸ್ಟ್ 1 ರಿಂದ ಜಾರಿಗೆ ಬರಲಿದ್ದು, ಹಳೆಯ ವ್ಯವಸ್ಥೆಯಿಂದ ಹೊಸ ವ್ಯವಸ್ಥೆಗೆ ಬದಲಾವಣೆಯ ಸಂದರ್ಭದಲ್ಲಿ ಪ್ರಯಾಣಿಕರಿಗೆ ಯಾವುದೇ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here