ವಾಲ್ಪಾಡಿ ಗ್ರಾಮ ಪಂಚಾಯತ್‌ನಿಂದ ವರ್ಗಾವಣೆಗೊಂಡ ಪಿಡಿಒ ಮಂಜುಳಾ ಹುನಗುಂದಗೆ ಬೀಳ್ಕೊಡುಗೆ

0
57

ಮೂಡುಬಿದಿರೆ: ವಾಲ್ಪಾಡಿ ಗ್ರಾಮ ಪಂಚಾಯತ್‌ನಲ್ಲಿ ದಕ್ಷತೆಯಿಂದ ಸೇವೆ ಸಲ್ಲಿಸಿ ಇದೀಗ ವರ್ಗಾವಣೆಗೊಂಡಿರುವ ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿಡಿಒ) ಮಂಜುಳಾ ಹುನಗುಂದ ಅವರಿಗೆ ಗುರುವಾರ ಗ್ರಾಮ ಪಂಚಾಯತ್ ವತಿಯಿಂದ ಹೃದಯಪೂರ್ವಕ ಬೀಳ್ಕೊಡುಗೆ ನೀಡಲಾಯಿತು.

ಪಂಚಾಯತ್ ಸಭಾಂಗಣದಲ್ಲಿ ನಡೆದ ಸರಳ ಸಮಾರಂಭದಲ್ಲಿ ಮಂಜುಳಾ ಹುನಗುಂದ ಅವರ ಸೇವೆಯನ್ನು ಸ್ಮರಿಸಿ, ಅವರನ್ನು ಅಭಿನಂದಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಪಂಚಾಯತ್ ಸದಸ್ಯರು, ಅವರ ಅವಧಿಯಲ್ಲಿ ನಡೆದ ಅಭಿವೃದ್ಧಿ ಕಾರ್ಯಗಳು ಹಾಗೂ ಆಡಳಿತ ನಿರ್ವಹಣೆಯಲ್ಲಿನ ಪಾರದರ್ಶಕತೆಯನ್ನು ಶ್ಲಾಘಿಸಿದರು.
ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ವಿಶಾಲಾಕ್ಷಿ, ಉಪಾಧ್ಯಕ್ಷ ಗಣೇಶ್ ಬಿ. ಅಳಿಯೂರು ಉಪಸ್ಥಿತರಿದ್ದರು. ಅಲ್ಲದೆ, ಪಂಚಾಯತ್‌ನ ಸರ್ವ ಸದಸ್ಯರಾದ ಪ್ರದೀಪ್ ಕುಮಾರ್, ಶ್ರೀಧರ್ ಬಂಗೇರ, ಅರುಣ್ ಕುಮಾರ್ ಶೆಟ್ಟಿ, ಭವಾನಿ, ಯಶೋಧ ನಾಯ್ಕ್, ಸುಶೀಲ, ವೈಶಾಲಿ, ನೂತನ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಲಜ, ಕಾರ್ಯದರ್ಶಿ ಶೇಖರ್, ಗ್ರಾಮಕರಣಿಕೆ ನಿಶ್ಮಿತಾ ಹಾಗೂ ಇತರ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here