Friday, January 17, 2025
Homeರಾಜ್ಯಆತ್ಮಹತ್ಯೆ ಮಾಡಿಕೊಂಡ ರೈತರ ತಲೆಬುರುಡೆ, ಮೂಳೆಗಳನ್ನಿಟ್ಟು ರೈತರ ಪ್ರತಿಭಟನೆ

ಆತ್ಮಹತ್ಯೆ ಮಾಡಿಕೊಂಡ ರೈತರ ತಲೆಬುರುಡೆ, ಮೂಳೆಗಳನ್ನಿಟ್ಟು ರೈತರ ಪ್ರತಿಭಟನೆ

ಬೆಳೆಗೆ ಉತ್ತಮ ಬೆಲೆ ನಿಗದಿ, ನದಿ ಜೋಡಣೆ ವಿಚಾರ ಕುರಿತು ತಮಿಳುನಾಡಿನ 200ಕ್ಕೂ ಅಧಿಕ ರೈತರು ದೆಹಲಿಯ ಜಂತರ್​ ಮಂತರ್​ನಲ್ಲಿ ಪ್ರತಿಭಟನೆ ನಡೆಸಿದರು. ಅವರು ಆತ್ಮಹತ್ಯೆ ಮಾಡಿಕೊಂಡ ರೈತರ ತಲೆಬುರುಡೆಗಳು ಹಾಗೂ ಮೂಳೆಗಳನ್ನಿಟ್ಟುಕೊಂಡು ಪ್ರತಿಭಟನೆ ನಡೆಸಿದ್ದಾರೆ.

ಕೃಷಿಯಲ್ಲಿ ಆದಾಯ ದ್ವಿಗುಣಗೊಳಿಸುವುದಾಗಿ ಕೇಂದ್ರ ಸರ್ಕಾರ ಭರವಸೆ ನೀಡಿದ್ದರೂ ಬೆಳೆಗಳ ಬೆಲೆ ಏರಿಕೆ ಮಾಡಿಲ್ಲ ಎಂದು ರೈತರು ಪ್ರಶ್ನಿಸಿದರು. 2019ರಲ್ಲಿ ಪ್ರಧಾನಿ ನೀಡಿದ್ದ ಭರವಸೆಗಳನ್ನು ಈಡೇರಿಸಿಲ್ಲ, ನದಿಗಳನ್ನು ಪರಸ್ಪರ ಜೋಡಿಸುವುದಾಗಿ ಕೂಡ ಮಾತುಕೊಟ್ಟಿದ್ದರು ಅದನ್ನು ಕೂಡ ಮಾಡಿಲ್ಲ ಎಂದು ನ್ಯಾಷನಲ್ ಸೌತ್ ಇಂಡಿಯಾ ರಿವರ್ ಇಂಟರ್‌ಲಿಂಕಿಂಗ್ ಫಾರ್ಮರ್ಸ್ ಅಸೋಸಿಯೇಶನ್‌ನ ಅಧ್ಯಕ್ಷ ಅಯ್ಯಕಣ್ಣು ಹೇಳಿದ್ದಾರೆ.

ಒಂದು ವೇಳೆ ಸರ್ಕಾರ ತಮ್ಮ ಬೇಡಿಕೆಗೆ ಕಿವಿಗೊಡದಿದ್ದರೆ ವಾರಾಣಸಿಗೆ ತೆರಳಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಪ್ರತಿಭಟನಾಕಾರರು ಹೇಳಿದ್ದಾರೆ. ತಮ್ಮ ಬೇಡಿಕೆಗಳಿಗಾಗಿ ಈ ಹಿಂದೆ ಪ್ರತಿಭಟನೆ ನಡೆಸಿದ್ದೇವೆ, ನಾವು ಪ್ರಧಾನಿ ವಿರುದ್ಧವಾಗಿಲ್ಲ ಅಥವಾ ಯಾವುದೇ ರಾಜಕೀಯ ಪಕ್ಷದೊಂದಿಗೆ ಯಾವುದೇ ಸಂಪರ್ಕವನ್ನು ಹೊಂದಿಲ್ಲ, ನಮಗೆ ಅವರ ಸಹಾಯ ಮಾತ್ರ ಬೇಕು ಎಂದರು.

ಮೊದಲು ಪ್ರತಿಭಟನೆಗೆ ಅವಕಾಶ ನೀಡದಿದ್ದರೂ ನಂತರ ನ್ಯಾಯಾಲಯದ ಅನುಮತಿ ಪಡೆದು ಪ್ರತಿಭಟನೆ ನಡೆಸುತ್ತಿದ್ದೇವೆ ಎಂದು ಹೇಳಿದರು.

ನಾವು ಪ್ರಜಾಪ್ರಭುತ್ವ ದೇಶದಲ್ಲಿ ವಾಸಿಸುತ್ತಿದ್ದೇವೆ ಮತ್ತು ನಮಗೆ ಪ್ರತಿಭಟನೆ ಮಾಡುವ ಹಕ್ಕಿದೆ, ಆದರೆ ಪೊಲೀಸರು ನಮ್ಮನ್ನು ತಡೆದರು ಎಂದು ರೈತ ಮುಖಂಡ ಹೇಳಿದರು. ತಮಿಳುನಾಡಿನ ರೈತರು ಈ ಹಿಂದೆ ಜಂತರ್ ಮಂತರ್‌ನಲ್ಲಿ ಇದೇ ರೀತಿಯ ಪ್ರತಿಭಟನೆಗಳನ್ನು ನಡೆಸಿದ್ದರು.

RELATED ARTICLES
- Advertisment -
Google search engine

Most Popular