ತಾನು ಹೇಳಿದಂತೆ ತನ್ನ ಮಾತು ಕೇಳುತ್ತಿಲ್ಲ ಎಂಬ ಕೋಪದಿಂದ ತಂದೆಯೊಬ್ಬ 10 ವರ್ಷದ ಮಗಳನ್ನು ತಲೆ ಕೆಳಗಾಗಿ ನೇತು ಹಾಕಿ ಮನಬಂದಂತೆ ಥಳಿಸಿದ ಅಮಾನವೀಯ ಘಟನೆ ನಡೆದಿದೆ. ಉತ್ತರ ಪ್ರದೇಶದ ಲಲಿತ್‌ಪುರದಲ್ಲಿ ಈ ಘಟನೆ ನಡೆದಿದೆ. ಪೊಲೀಸರು ಆರೋಪಿಯನ್ನು ಈಗ ಬಂಧಿಸಿದ್ದಾರೆ.
ಆರೋಪಿ ಗೋವಿಂದ ರೈ ರೈಕ್ವಾರ್ ಎಂಬಾತ ತನ್ನ ಮಗಳಿಗೆ ಚಿತ್ರಹಿಂಸೆ ನೀಡುತ್ತಿರುವುದನ್ನು ಗಮನಿಸಿದ ನೆರೆ ಮನೆಯವರು ವಿಡಿಯೋ ಮಾಡಿ ಪೊಲೀಸರಿಗೆ ದೂರು ನೀಡಿದ್ದಾರೆ. ಇದರ ಆಧಾರದ ಮೇಲೆ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ ವೇಳೆ ಸತ್ಯಾಂಶ ಹೊರಬಿದ್ದಿದೆ.