Thursday, April 24, 2025
HomeUncategorizedಫೆ.9: ಮಂಗಳೂರು ಪ್ರೆಸ್ ಕ್ಲಬ್ ದಿನಾಚರಣೆ

ಫೆ.9: ಮಂಗಳೂರು ಪ್ರೆಸ್ ಕ್ಲಬ್ ದಿನಾಚರಣೆ

ಮಂಗಳೂರು : ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಪ್ರೆಸ್ ಕ್ಲಬ್ ದಿನಾಚರಣೆ ಫೆ.9ರಂದು ಬೆಳಗ್ಗೆ 10ಕ್ಕೆ ನಗರದ ಮೋರ್ಗನ್ಸ್‌ಗೇಟ್ ಬಳಿಯ ಪಾಲೆಮಾರ್ ಗಾರ್ಡನ್‌ಮಲ್ಲಿ ನಡೆಯಲಿದೆ. ಮಾಜಿ ಮೇಯರ್, ಕಾರ್ಡೋಲೈಟ್ ಸ್ಪೆಷಾಲಿಟಿ ಕೆಮಿಕಲ್ಸ್ ಇಂಡಿಯಾದ ಜನರಲ್ ಮ್ಯಾನೇಜರ್ ದಿವಾಕರ್ ಕದ್ರಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. 2024ನೇ ಸಾಲಿನ ಮಂಗಳೂರು ಪ್ರೆಸ್ ಕ್ಲಬ್ ವಾರ್ಷಿಕ  ಪ್ರಶಸ್ತಿಗೆ ಆಯ್ಕೆಯಾಗಿರುವ ಮನಪಾ ಕಾರ್ಪೋರೇಟರ್ ಗಣೇಶ್ ಕುಲಾಲ್ ಇವರಿಗೆ ಮಾಜಿ ಸಚಿವ ಕೃಷ್ಣ.ಜೆ.ಪಾಲೆಮಾರ್ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಅಧ್ಯಕ್ಷತೆ ವಹಿಸಲಿದ್ದಾರೆ.
ವಾರ್ತಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಖಾದರ್ ಶಾ ಅವರು ಹಿರಿಯ ಪತ್ರಕರ್ತರಿಗೆ ಗೌರವ ಸನ್ಮಾನ ಹಾಗೂ ಪ್ರೆಸ್ ಕ್ಲಬ್ ಸ್ಥಾಪಕ ಅಧ್ಯಕ್ಷ ಆನಂದ ಶೆಟ್ಟಿ ಅವರು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೆರವೇರಿಸಲಿದ್ದಾರೆ. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ  ಶ್ರೀನಿವಾಸ ನಾಯಕ್ ಇಂದಾಜೆ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ .ಆರ್, ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಸಮಿತಿ ಸದಸ್ಯ ಜಗನ್ನಾಥ ಶೆಟ್ಟಿ ಬಾಳ, ಪ್ರೆಸ್ ಕ್ಲಬ್‌ನ ನಿಕಟಪೂರ್ವ ಅಧ್ಯಕ್ಷ ಅನ್ನು ಮಂಗಳೂರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಪ್ರೆಸ್ ಕ್ಲಬ್‌ನ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular