ಮೂಡುಮರ್ನಾಡು ಪ್ರೌಢಶಾಲೆಯಲ್ಲಿ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಶಿಕ್ಷಕರ ಅಭಿನಂದನಾ ಕಾರ್ಯಕ್ರಮ

0
59

ಮೂಡುಮರ್ನಾಡು : ಮೂಡುಮರ್ನಾಡು ಪಿ.ಎಂ.ಶ್ರೀ ಸರಕಾರಿ ಸಂಯುಕ್ತ ಪ್ರೌಢಶಾಲೆಯಲ್ಲಿ ಸಮಾಜ ವಿಜ್ಞಾನ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿರುವ ಹಾಗೂ 2026ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಪುರಸ್ಕೃತರಾಗಿರುವ ಜೋನ್ ರೊನಾಲ್ಡ್ ಡಿಸೋಜ ಅವರನ್ನು ಶಾಲಾ ಎಸ್.ಡಿ.ಎಂ.ಸಿ. ಹಾಗೂ ಊರವರ ಪರವಾಗಿ ಅಭಿನಂದಿಸುವ ಕಾರ್ಯಕ್ರಮ ನಡೆಯಿತು.

ಆಂಗ್ಲ ಭಾಷಾ ಶಿಕ್ಷಕಿ ಛಾಯಾ ಕಿಣಿ ಅಭಿನಂದನಾ ನುಡಿಗಳನ್ನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಎಸ್.ಡಿ.ಎಂ.ಸಿ. ಅಧ್ಯಕ್ಷ ಭಾಸ್ಕರ್ ಎಸ್. ಕೋಟ್ಯಾನ್ ಅವರು ಜೋನ್ ರೊನಾಲ್ಡ್ ಡಿಸೋಜ ಅವರನ್ನು ಶಾಲು, ಹಾರ ಹಾಗೂ ಫಲಪುಷ್ಪಗಳೊಂದಿಗೆ ಸನ್ಮಾನಿಸಿ, ಶಾಲೆಯಲ್ಲಿ ಅವರು ಸಲ್ಲಿಸಿದ ಅಮೂಲ್ಯ ಸೇವೆಯನ್ನು ಸ್ಮರಿಸಿ ಅಭಿನಂದಿಸಿದರು.

ಕಾರ್ಯಕ್ರಮದಲ್ಲಿ ಮೂಡುಬಿದಿರೆ ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್.ಎಸ್. ವಿರೂಪಾಕ್ಷಪ್ಪ, ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ಡಾ. ರಾಜಶ್ರೀ ಬಿ., ತಾಲೂಕು ಸರಕಾರಿ ನೌಕರರ ಸಂಘದ ಮಾಜಿ ಅಧ್ಯಕ್ಷ ನಾಗೇಶ್, ಮೆಲ್ವಿನ್ ಅಲ್ಬುರ್ಕ್, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಗಣೇಶ್, ಎಸ್.ಡಿ.ಎಂ.ಸಿ. ಸದಸ್ಯರಾದ ಅಶೋಕ್ ಹಾಗೂ ಸುಶೀಲ ಉಪಸ್ಥಿತರಿದ್ದರು.

ಮುಖ್ಯ ಶಿಕ್ಷಕಿ ಸುಜಾತ ಕುಮಾರಿ ಶೆಟ್ಟಿ ಸ್ವಾಗತಿಸಿದರು. ಹಿಂದಿ ಶಿಕ್ಷಕಿ ಬಾಬಿ ವಂದನಾರ್ಪಣೆಗೈದರು. ಗಣಿತ ಶಿಕ್ಷಕಿ ಸುಮಿತಾ ಕಾರ್ಯಕ್ರಮ ನಿರ್ವಹಿಸಿದರು.