Wednesday, October 9, 2024
Homeಅಪರಾಧಮಹಿಳಾ ಹೆಡ್ ಕಾನ್‌ಸ್ಟೆಬಲ್​​ಗೆ​ ಗನ್ ತೋರಿಸಿ ಅತ್ಯಾಚಾರ

ಮಹಿಳಾ ಹೆಡ್ ಕಾನ್‌ಸ್ಟೆಬಲ್​​ಗೆ​ ಗನ್ ತೋರಿಸಿ ಅತ್ಯಾಚಾರ

ಭೂಪಾಲ ಪಲ್ಲಿ: ತೆಲಂಗಾಣದಲ್ಲಿ ಸಾರ್ವಜನಿಕರನ್ನು ರಕ್ಷಣೆ ಮಾಡುವ ಪೊಲೀಸರ ಮೇಲೆಯೇ ಅತ್ಯಾಚಾರ ಮಾಡಿರುವ ಅವಮಾನೀಯ ಘಟನೆಯೊಂದು ನಡೆದಿದೆ. ಜಯಶಂಕರ್ ಭೂಪಾಲಪಲ್ಲಿ ಜಿಲ್ಲೆಯಲ್ಲಿ ಮಹಿಳಾ ಹೆಡ್ ಕಾನ್‌ಸ್ಟೆಬಲ್​​​ಗೆ ಗನ್ ತೋರಿಸಿ ಅತ್ಯಾಚಾರ ಮಾಡಲಾಗಿದೆ. ಮಹಿಳಾ ಹೆಡ್ ಕಾನ್‌ಸ್ಟೆಬಲ್ ದೂರಿನ ಆಧಾರ ಮೇಲೆ ತನಿಖೆ ನಡೆಸಿದಾಗ ಆರೋಪ ದೃಢಪಟ್ಟಿದ್ದು,ಇದೀಗ ಈ ಘಟನೆಗೆ ಸಂಬಂಧಿಸಿದಂತೆ ಬುಧವಾರ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಬಂಧಿಸಲಾಗಿದೆ ಎಂದು ತೆಲಂಗಾಣ ಪೊಲೀಸರು ತಿಳಿಸಿದ್ದಾರೆ.

ಜಿಲ್ಲೆಯ ಕಾಳೇಶ್ವರಂ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಭವಾನಿ ಸೇನ್ ಎಂಬ ಸಬ್ ಇನ್ಸ್‌ಪೆಕ್ಟರ್ ಈ ಕೃತ್ಯವನ್ನು ಮಾಡಿದ್ದಾನೆ ಎಂದು ಹೇಳಲಾಗಿದೆ. ಆಕೆ ನೀಡಿದ ದೂರಿನಲ್ಲಿ ಜೂನ್ 16 ರಂದು ನೀರಾವರಿ ಯೋಜನೆಯ ವಸತಿ ಸೌಲಭ್ಯದ ಅತಿಥಿ ಕೊಠಡಿಯಲ್ಲಿ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಹೇಳಿದ್ದಾರೆ. ಎಸ್‌ಐ ರಿವಾಲ್ವರ್ ತೋರಿಸಿ ಬೆದರಿಸಿ ಅತ್ಯಾಚಾರವೆಸಗಿದ್ದಾನೆ. ನಂತರ ಈ ವಿಚಾರವನ್ನು ಯಾರಿಗೂ ಹೇಳಬಾರದು ಎಂದು ಬೆದರಿಕೆ ಹಾಕಿದ್ದಾನೆ ಎಂದು ಹೆಡ್ ಕಾನ್‌ಸ್ಟೆಬಲ್ ಆರೋಪಿಸಿದರು.

ಸಬ್ ಇನ್ಸ್ ಪೆಕ್ಟರ್ ಭವಾನಿ ಸೇನ್ ವಿರುದ್ಧದ ಆರೋಪವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸ್ ಮಹಾನಿರೀಕ್ಷಕ (ಮಲ್ಟಿ ಝೋನ್ -1) ಎ.ವಿ.ರಂಗನಾಥ್, ಭವಾನಿ ಸೇನ್ ಅವರನ್ನು ಸೇವೆಯಿಂದ ಶಾಶ್ವತವಾಗಿ ವಜಾಗೊಳಿಸಿ ಆದೇಶ ಹೊರಡಿಸಿದ್ದಾರೆ. ಕಾನ್‌ಸ್ಟೆಬಲ್ ದೂರಿನ ಆಧಾರದ ಮೇಲೆ ಎಸ್‌ಐ ವಿರುದ್ಧ ಐಪಿಸಿಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

RELATED ARTICLES
- Advertisment -
Google search engine

Most Popular