Friday, May 23, 2025
Homeಪುತ್ತೂರುಉಪ್ಪಿನಂಗಡಿ | ಹಠಾತ್‌ ಅನಾರೋಗ್ಯ; ತೀವ್ರ ಜ್ವರದಿಂದ ಬಳಲುತ್ತಿದ್ದ ಯುವತಿ ಸಾವು

ಉಪ್ಪಿನಂಗಡಿ | ಹಠಾತ್‌ ಅನಾರೋಗ್ಯ; ತೀವ್ರ ಜ್ವರದಿಂದ ಬಳಲುತ್ತಿದ್ದ ಯುವತಿ ಸಾವು

ಉಪ್ಪಿನಂಗಡಿ: ಯುವತಿಯೊಬ್ಬಳು ಹಠಾತ್‌ ಅನಾರೋಗ್ಯದಿಂದ ಸಾವನ್ನಪ್ಪಿದ ಘಟನೆ ಶಿಶಿಲ ಗ್ರಾಮದಲ್ಲಿ ನಡೆದಿದೆ. ಶಿಶಿಲ ಗ್ರಾಮದ ಪೆರಿಕೆ ನಿವಾಸಿ ಸುಪ್ರೀತಾ (16) ಅನಾರೋಗ್ಯದಿಂದ ಮಂಗಳವಾರ ನಿಧನರಾಗಿದ್ದಾರೆ.
ಕೃಷ್ಣಪ್ಪ ಮಲೆಕುಡಿಯ ಮತ್ತು ಸುನಂದಾ ದಂಪತಿಯ ಪುತ್ರಿ ಸುಪ್ರೀತಾ ಕಳೆದ ಎರಡು ದಿನಗಳಿಂದ ಜ್ವರದಿಂದ ಬಳಲುತ್ತಿದ್ದರು. ಜ್ವರಕ್ಕಾಗಿ ಆಕೆಗೆ ಚಿಕಿತ್ಸೆ ನೀಡಲಾಗಿತ್ತು. ಮಂಗಳವಾರ ಆರೋಗ್ಯ ತೀವ್ರ ಹದಗೆಟ್ಟಿದ್ದ ಹಿನ್ನೆಲೆಯಲ್ಲಿ, ಉಪ್ಪಿನಂಗಡಿ ಆಸ್ಪತ್ರೆಗೆ ಕೊಂಡೊಯ್ಯಲಾಗಿತ್ತು. ಆದರೆ ಮನೆಗೆ ಹಿಂದಿರುಗುವಾಗ ಮಾರ್ಗಮಧ್ಯೆ ಆಕೆ ಪ್ರಜ್ಞೆ ಕಳೆದುಕೊಂಡಿದ್ದನ್ನು ನೋಡಿ ಮತ್ತೆ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಈ ವೇಳೆ ಪರೀಕ್ಷಿಸಿ ವೈದ್ಯರು ಆಕೆ ಮೃತಪಟ್ಟಿರುವುದಾಗಿ ದೃಢಪಡಿಸಿದರು, ಸುಪ್ರೀತಾ ತಂದೆ, ತಾಯಿ ಮತ್ತು ಸಹೋದರನನ್ನು ಅಗಲಿದ್ದಾರೆ.

RELATED ARTICLES
- Advertisment -
Google search engine

Most Popular