Tuesday, April 22, 2025
Homeರಾಜಕೀಯದಕ್ಷಿಣ ಕನ್ನಡದಿಂದ ಅಂತಿಮವಾಗಿ 9 ಅಭ್ಯರ್ಥಿಗಳು ಕಣದಲ್ಲಿ

ದಕ್ಷಿಣ ಕನ್ನಡದಿಂದ ಅಂತಿಮವಾಗಿ 9 ಅಭ್ಯರ್ಥಿಗಳು ಕಣದಲ್ಲಿ

ದಕ್ಷಿಣ ಕನ್ನಡ: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರಕ್ಕೆ ಏಪ್ರಿಲ್ 26ರಂದು ನಡೆಯುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಪದ್ಮರಾಜ್ ಹಾಗೂ ಬಿಜೆಪಿ ಪಕ್ಷದಿಂದ ಕ್ಯಾ.ಬ್ರಿಜೇಶ್‌ ಚೌಟ ಸಹಿತ 9 ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ಬಿಜೆಪಿಯ ಕ್ಯಾ.ಬ್ರಿಜೇಶ್ ಚೌಟ, ಕಾಂಗ್ರೆಸ್‌ನ ಆರ್.ಪದ್ಮರಾಜ್, ಬಹುಜನ ಸಮಾಜ ಪಕ್ಷದ ಕಾಂತಪ್ಪ ಅಲಂಗಾ‌ರ್, ಕರ್ನಾಟಕ ರಾಷ್ಟ್ರ ಸಮಿತಿಯ ರಂಜಿನಿ ಎಂ, ಉತ್ತಮ ಪ್ರಜಾಕೀಯ ಪಕ್ಷದ ಕೆ.ಇ.ಮನೋಹರ, ಕರುನಾಡ ಸೇವಕ ಪಕ್ಷದ ದುರ್ಗಾಪ್ರಸಾದ್‌, ಪಕ್ಷೇತರರಾಗಿ ದೀಪಕ್ ರಾಜೇಶ್ ಕುವೆಲ್ಲೊ, ಮೆಕ್ಸಿಂ ಪಿಂಟೊ ಹಾಗೂ ಸುಪ್ರೀತ್ ಕುಮಾ‌ರ್ ಪೂಜಾರಿ ಕಣದಲ್ಲಿ ಇದ್ದಾರೆ.

ನಾಮಪತ್ರ ಸಲ್ಲಿಸಿದ್ದ 11 ಮಂದಿಯ ಪೈಕಿ 10 ಅಭ್ಯರ್ಥಿಗಳ ನಾಮಪತ್ರ ಕ್ರಮಬದ್ಧವಾಗಿತ್ತು. ಪಕ್ಷೇತರ ಅಭ್ಯರ್ಥಿಗಳ ಪೈಕಿ ಪ್ರಾನ್ಸಿಸ್ ಲ್ಯಾನ್ಸಿ ಮಾಡ್ತಾ ಅವರ ನಾಮಪತ್ರ ತಿರಸ್ಕೃತಗೊಂಡಿತ್ತು. ಏಪ್ರಿಲ್ 8 ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿತ್ತು. ಅದರಂತೆ, ಪಕ್ಷೇತರ ಅಭ್ಯರ್ಥಿ ಸತೀಶ್ ಬೂಡುಮಕ್ಕಿ ನಾಮಪತ್ರ ವಾಪಸ್ ಪಡೆದಿದ್ದಾರೆ ಎಂದು ಚುನಾವಣಾಧಿಕಾರಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular