ಬ್ರಹ್ಮಾವರ : ಗ್ರಾಮಾಭಿವೃದ್ಧಿ ಮತ್ತು ಸ್ವ ಉದ್ಯೋಗ ತರಬೇತಿ (ರುಡ್ ಸೆಟ್) ಸಂಸ್ಥೆ ಬ್ರಹ್ಮಾವರ ಇವರ ಆಶ್ರಯದಲ್ಲಿ ರುಡ್ ಸೆಟ್ ಸಂಸ್ಥೆ ಬ್ರಹ್ಮಾವರದಲ್ಲಿ ಹಣಕಾಸು ಸಾಕ್ಷರತಾ ಸಪ್ತಾಹ ಕಾರ್ಯಕ್ರಮವು ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ಮಾತನಾಡಿದ ಶ್ರೀಮತಿ. ವಿಜಯಶ್ರೀ, ಲೀಡ್ ಡಿಸ್ಟ್ರಿಕ್ಟ್ ಆಫೀಸರ್, ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ.

ಅವರು ಶಿಬಿರಾರ್ಥಿಗಳನ್ನುಡ್ಡೇಶಿಸಿ ಮಾತನಾಡಿ, ಭಾರತೀಯ ರಿಸರ್ವ್ ಬ್ಯಾಂಕ್ ಹಣಕಾಸು ಸಾಕ್ಷರತಾ ಸಪ್ತಾಹ ಕಾರ್ಯಕ್ರಮವನ್ನು ಆಯೋಜನೆಯನ್ನು ಮಾಡಿ ಸಾರ್ವಜನಿಕರಲ್ಲಿ ಬ್ಯಾಂಕಿಂಗ್, ಸುರಕ್ಷಿತ ಡಿಜಿಟಲ್ ವ್ಯವಹಾರಗಳು ಮತ್ತು ಹಣಕಾಸು ನಿರ್ವಹಣೆಯ ಬಗ್ಗೆ ಅರಿವು ಮೂಡಿಸುವುದಾಗಿದೆ. ಹಾಗಾಗಿ ಖಾಸಗಿ ವೈ ಫೈ ಬಳಸುವಾಗ ಜಾಗೃತರಾಗಿ, ಹಾಗೂ ಅಂತಹ ಸಂದರ್ಭದಲ್ಲಿ ಆನ್ಲೈನ್ ಮುಖಾಂತರ ಹಣಕಾಸಿನ ವ್ಯವಹಾರ ಮಾಡಲು ಹೋಗಬೇಡಿ ಹಾಗೂ ಇನ್ನಿತರ ವಿಷಯಗಳ ಬಗ್ಗೆ ಮಾಹಿತಿ ನೀಡಿ, ಶಿಬಿರಾರ್ಥಿಗಳಿಗೆ ಶುಭಹಾರೈಸಿದರು.
ಇನ್ನೋರ್ವ ಅತಿಥಿಯಾಗಿ ಆಗಮಿಸಿದ ಹರೀಶ್ ಜಿ, ಲೀಡ್ ಡಿಸ್ಟ್ರಿಕ್ಟ್ ಮ್ಯಾನೇಜರ್, ಉಡುಪಿ ಮಾತನಾಡಿ ಹಣಕಾಸು ಮ್ಯೂಲ್ ಗಳ ಬಗ್ಗೆ ವಿವರಿಸಿದರು.
ಅದೇ ರೀತಿ ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ರುಡ್ ಸೆಟ್ ಸಂಸ್ಥೆಯ ನಿರ್ದೇಶಕರಾದ ಬೊಮ್ಮಯ್ಯ ಎಂ ಮಾತನಾಡಿ ಆರ್ಥಿಕ ಶಿಸ್ತು ಹಾಗೂ ಉತ್ತಮ ಕ್ರೆಡಿಟ್ ಸ್ಕೋರ್ ಕಾಪಾಡಿಕೊಳ್ಳುವ ಮಹತ್ವದ ಕುರಿತು ವಿವರಿಸಿದರು.
ಈ ಸಂದರ್ಭದಲ್ಲಿ ಚೈತ್ರ ಕೆ, ಉಪನ್ಯಾಸಕರು ಕಾರ್ಯಕ್ರಮವನ್ನು ನಿರೂಪಿಸಿ, ಸ್ವಾಗತಿಸಿದರು, ನಿರಂಜನ್, ಆಫೀಸರ್, ಕೆನರಾ ಬ್ಯಾಂಕ್ ವಂದಿಸಿದರು.

