Thursday, July 25, 2024
Homeಮಂಗಳೂರುಐಸ್​ಕ್ರೀಂನಲ್ಲಿ ಬೆರಳು ಪತ್ತೆ ಪ್ರಕರಣ: ಕಂಪನಿಯ ಪರವಾನಗಿ ರದ್ದು ಮಾಡಿದ ಎಫ್​ಎಸ್​ಎಸ್​ಎಐ

ಐಸ್​ಕ್ರೀಂನಲ್ಲಿ ಬೆರಳು ಪತ್ತೆ ಪ್ರಕರಣ: ಕಂಪನಿಯ ಪರವಾನಗಿ ರದ್ದು ಮಾಡಿದ ಎಫ್​ಎಸ್​ಎಸ್​ಎಐ

ಐಸ್​ಕ್ರೀಮ್ ನಲ್ಲಿ ಮಾನವನ ಬೆರಳು ಪತ್ತೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕಂಪನಿಯ ಪರವಾನಗಿಯನ್ನು ಎಫ್​ಎಸ್​ಎಸ್​ಎಐ ರದ್ದುಗೊಳಿಸಿದೆ. ಪುಣೆಯ ಮಲಾಡ್​ ವೆಸ್ಟ್​ನಲ್ಲಿ 26 ವರ್ಷದ ವೈದ್ಯರೊಬ್ಬರು ಆನ್​ಲೈನ್​ನಲ್ಲಿ ಐಸ್​ಕ್ರೀಂ ಕೋನ್​ ಆರ್ಡರ್​ ಮಾಡಿದ್ದರು, ಅದರ ಒಂದು ಕೋನ್​ನಲ್ಲಿ ಮಾನವನ ಬೆರಳು ಪತ್ತೆಯಾಗಿತ್ತು.

ಎಫ್​ಎಸ್​ಎಸ್​ಎಐ ಕಚೇರಿಯ ತಂಡವು ಕಂಪನಿಯ ಆವರಣವನ್ನು ಪರಿಶೀಲಿಸಿದೆ ಮತ್ತು ಪರವಾನಗಿ ರದ್ದುಗೊಳಿಸಿದೆ.
ಆದರೆ, ವಿಧಿವಿಜ್ಞಾನ ಪ್ರಯೋಗಾಲಯದ ವರದಿ ಇನ್ನಷ್ಟೇ ಬರಬೇಕಿದೆ. ಐಸ್​ಕ್ರೀಂನಲ್ಲಿ ಮನುಷ್ಯನ ಬೆರಳು ಪತ್ತೆಯಾಗಿರುವ ಆಘಾತಕಾರಿ ಘಟನೆ ಮುಂಬೈನಲ್ಲಿ ನಡೆದಿದೆ. ಮಲಾಡ್ ನಿವಾಸಿ ಡಾ.ಒರ್ಲಾಮ್ ಬ್ರಾಂಡನ್ ಸೆರಾವೊ ಅವರು ಆನ್‌ಲೈನ್‌ನಲ್ಲಿ ಐಸ್ ಕ್ರೀಮ್ ಆರ್ಡರ್ ಮಾಡಿದ್ದರು. ಅವರು ಬಹಳ ಆಸಕ್ತಿಯಿಂದ ಐಸ್​ಕ್ರೀಂ ತೆಗೆದು ನೋಡಿ ದಿಗ್ಭ್ರಮೆಗೊಂಡಿದ್ದಾರೆ. ಆ ಐಸ್​ಕ್ರೀಂನಲ್ಲಿ ಮಾನವನ ಬೆರಳು ಪತ್ತೆಯಾಗಿದ್ದು, ಈ ಚಿತ್ರವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರು.

ಮೊದಲು ವಾಲ್ನಟ್​ ಎಂದುಕೊಂಡೆವು ಬಳಿಕ ಕೂಲಂಕುಷವಾಗಿ ಪರಿಶೀಲನೆ ನಡೆಸಿದಾಗ ಇದು ಬೆರಳು ಎಂಬುದು ಅರಿವಾಗಿದೆ ಎಂದಿದ್ದಾರೆ. ನಾನು ಮೂರು ಐಸ್​ಕ್ರೀಂಗಳನ್ನು ಆರ್ಡರ್​ ಮಾಡಿದ್ದೆ, ನಾನು ಬಟರ್​ಸ್ಕಾಚ್​ ಐಸ್ಕ್ರೀಂ ತಿನ್ನುತ್ತಿದ್ದೆ ಆಗ ಇದ್ದಕ್ಕಿದ್ದಂತೆ ಹಲ್ಲಿಗೇನೋ ತಾಗಿದಂತಾಯಿತು ನಾನು ವಾಲ್ನಟ್ ಅಥವಾ ಚಾಕೊಲೇಟ್​ ಇರಬೇಕು ಎಂದುಕೊಂಡೆ, ಬಳಿಕ ಉಗುಳಿದಾಗ ಅದು ವಾಲ್ನಟ್ ಆಗಿರಲಿಲ್ಲ, ಮನುಷ್ಯನ ಬೆರಳಾಗಿದ್ದು, ಅದನ್ನು ನೋಡಿ ಒಮ್ಮೆ ದಿಗ್ಭ್ರಮೆಗೊಂಡೆ.
ನಾನು ವೈದ್ಯನಾಗಿರುವ ಕಾರಣ ಇದು ಹೆಬ್ಬರಳಿನ ಭಾಗ ಎಂಬುದು ನಾನು ಅರ್ಥಮಾಡಿಕೊಂಡೆ ಅದರಲ್ಲಿ ಉಗುರು ಕೂಡ ಇದೆ ಎಂದರು. ನಾನು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದೆ ಎಂದು ವೈದ್ಯ ಹೇಳಿದ್ದಾರೆ.

ಪೊಲೀಸರು ಈ ಕುರಿತು ತನಿಖೆ ನಡೆಸುತ್ತಿದ್ದಾರೆ, ಐಸ್​​ಕ್ರೀಂ ಬ್ರ್ಯಾಂಡ್​ ವಿರುದ್ಧ ಕಲಬೆರಕೆ ಮತ್ತು ಜನರ ಜೀವಕ್ಕೆ ಅಪಾಯ ತಂದಿರುವ ಆರೋಪದಡಿ ಪ್ರಕರಣ ದಾಖಲಿಸಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರು ಬೆರಳನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿದ್ದಾರೆ, ಈ ಬಗ್ಗೆ ತನಿಖೆ ನಡೆಸುತ್ತಿದ್ದು, ಐಸ್​ಕ್ರೀಂನಲ್ಲಿ ಬೆರಳು ಎಲ್ಲಿಂದ ಬಂತು ಎಂಬುದನ್ನೂ ಪತ್ತೆ ಮಾಡುತ್ತಿದ್ದೇವೆ ಎಂದು ಪೊಲೀಸರು ಹೇಳಿದ್ದಾರೆ.

RELATED ARTICLES
- Advertisment -
Google search engine

Most Popular