Monday, February 10, 2025
Homeಬೆಂಗಳೂರುಲೈಟ್ ಬಾಯ್ ಸಾವು | ನಿರ್ದೇಶಕ ಯೋಗರಾಜ್‌ ಭಟ್‌ ವಿರುದ್ಧ ಎಫ್‌ಐಆರ್‌ ದಾಖಲು

ಲೈಟ್ ಬಾಯ್ ಸಾವು | ನಿರ್ದೇಶಕ ಯೋಗರಾಜ್‌ ಭಟ್‌ ವಿರುದ್ಧ ಎಫ್‌ಐಆರ್‌ ದಾಖಲು

ಬೆಂಗಳೂರು: ಸಿನಿಮಾ ಚಿತ್ರೀಕರಣದ ವೇಳೆ 30 ಅಡಿ ಎತ್ತರದಿಂದ ಬಿದ್ದು ಲೈಟ್ ಬಾಯ್ ಸಾವನ್ನಪ್ಪಿರೋ ಘಟನೆ ನೆಲಮಂಗಲದ ಅಡಕಮಾರನಹಳ್ಳಿ ಬಳಿ ನಡೆದಿದೆ. ನಿರ್ದೇಶಕ ಯೋಗರಾಜ್‌ ಭಟ್‌ ನಿರ್ದೇಶನದ ‘ಮನದ ಕಡಲು’ ಚಿತ್ರದ ಚಿತ್ರೀಕರಣದ ವೇಳೆ ಈ ದುರ್ಘಟನೆ ಸಂಭವಿಸಿದೆ. ಮೋಹನ್ ಕುಮಾರ್ ಮೃತ ದುರ್ದೈವಿ.
ಮೋಹನ್ ಕುಮಾರ್ ತಲೆಗೆ ಗಂಭೀರ ಏಟಾಗಿ, ರಕ್ತಸ್ರಾವದಿಂದ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಘಟನೆಗೆ ಸಂಬಂಧಿಸಿ ನಿರ್ದೇಶಕ ಯೋಗರಾಜ್ ಭಟ್, ಮ್ಯಾನೇಜರ್ ಸುರೇಶ್, ಅಸಿಸ್ಟೆಂಟ್ ಮ್ಯಾನೇಜರ್ ಮನೋಹರ್, ಅಡಕಮಾರನಹಳ್ಳಿಯ ಕೃಷ್ಣಪ್ಪ ವಿರುದ್ದ ಎಫ್ಐಆರ್ ದಾಖಲಾಗಿದೆ.
ಸೆ. 3ರಂದು ಅಡಕಮಾರನಹಳ್ಳಿ ಗೋಡೌನ್​​ವೊಂದರ ಬಳಿ ಮನದ ಕಡಲು ಸಿನಿಮಾ ಶೂಟಿಂಗ್ ನಡೆಯುತ್ತಿತ್ತು. 30 ಅಡಿ ಎತ್ತರದ ಅಲ್ಯೂಮಿನಿಯಂ ರೋಸ್ಟ್ರಮ್ ಮೇಲೆ ಹತ್ತಿ ಲೈಟ್ ಬಿಚ್ಚುತ್ತಿದ್ದ ವೇಳೆ ಲೈಟ್ ಬಾಯ್ ಏಕಾಏಕಿ ಕೆಳಗಡೆ ಬಿದ್ದಿದ್ದಾನೆ. ಇದರಿಂದಾಗಿ ಮೋಹನ್ ಕುಮಾರ್ ತಲೆಗೆ ಗಂಭೀರ ಪೆಟ್ಟಾಗಿದೆ. ಕೂಡಲೇ ಆತನನ್ನು ಗೋರಗುಂಟೆಪಾಳ್ಯದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಲೈಟ್ ಬಾಯ್ ಮೃತಪಟ್ಟಿದ್ದಾರೆ. ಹೀಗಾಗಿ ಲೈಟ್ ಬಾಯ್ ಸಹೋದರ ಶಿವರಾಜ್ ದೂರಿನನ್ವಯ ಮಾದನಾಯಕನಹಳ್ಳಿ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ.

RELATED ARTICLES
- Advertisment -
Google search engine

Most Popular