ಜಮ್ಮು: ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯಲ್ಲಿ ಬುಧವಾರ ಮುಂಜಾನೆ ನಿವೃತ್ತ ಪೊಲೀಸ್ ಅಧಿಕಾರಿಯೊಬ್ಬರ ಬಾಡಿಗೆ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡು ಇಬ್ಬರು ಮಕ್ಕಳು ಸೇರಿದಂತೆ ಆರು ಜನರು ಉಸಿರುಗಟ್ಟಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಥುವಾ ಜಿಲ್ಲೆಯ ಶಿವನಗರ ಪ್ರದೇಶದಲ್ಲಿ ನಸುಕಿನ ಜಾವ 2.30ರ ಸುಮಾರಿಗೆ ಮನೆಯಲ್ಲಿ ಬೆಂಕಿ ಹೊತ್ತಿಕೊಂಡಿರುವುದನ್ನು ಗಮನಿಸಿದ ಸ್ಥಳೀಯರು ಮನೆಗೆ ಧಾವಿಸಿದ್ದಾರೆ.
ಗಾಯಾಳುಗಳನ್ನು ಕಥುವಾದಲ್ಲಿನ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು, ಅಲ್ಲಿ ಇಬ್ಬರು ಅಪ್ರಾಪ್ತರು ಸೇರಿದಂತೆ ಆರು ಮಂದಿ ಮೃತಪಟ್ಟರು, ಹತ್ತು ಮಂದಿಯನ್ನು ಆಸ್ಪತ್ರೆಗೆ ಕರೆತರಲಾಯಿತು. ಅವರಲ್ಲಿ ಆರು ಮಂದಿ ಮೃತಪಟ್ಟು ನಾಲ್ವರು ಗಾಯಗೊಂಡಿದ್ದಾರೆ ಎಂದು ಆಸ್ಪತ್ರೆಯ ಹಿರಿಯ ವೈದ್ಯರು ತಿಳಿಸಿದ್ದಾರೆ. ದಟ್ಟ ಹೊಗೆಯಿಂದ ಉಸಿರುಗಟ್ಟುವಿಕೆಯಿಂದ ಮೃತಪಟ್ಟಿದ್ದಾರೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಯಾವುದೇ ಸುಟ್ಟ ಗಾಯಗಳು ವರದಿಯಾಗಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.