Sunday, July 14, 2024
Homeಅಪಘಾತಹಾಸ್ಟೆಲ್ ನಲ್ಲಿ ಅಗ್ನಿ ಅವಘಡ; 7 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

ಹಾಸ್ಟೆಲ್ ನಲ್ಲಿ ಅಗ್ನಿ ಅವಘಡ; 7 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

ರಾಜಸ್ಥಾನ: ಕೋಟಾದಲ್ಲಿರುವ ಹಾಸ್ಟೆಲ್‌ನಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, 7 ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಇನ್ನೂ ಉಳಿಸಿಕೊಳ್ಳಲು ಕಟ್ಟಡದಿಂದ ಜಿಗಿದು ಮೂಳೆ ಮುರಿದುಕೊಂಡಿದ್ದಾರೆ.

ಟ್ರಾನ್ಸ್‌ಫಾರ್ಮರ್ ನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಭಾನುವಾರ ಬೆಳಗ್ಗೆ 6 ಗಂಟೆಗೆ ಕೋಟಾದ ಹಾಸ್ಟೆಲ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇದಾದ ಬಳಿಕ ಬೆಂಕಿ ಹೊತ್ತಿಕೊಂಡಿದೆ. ಘಟನೆಯ ವೇಳೆ 6 ಅಂತಸ್ತಿನ ಹಾಸ್ಟೆಲ್‌ನಲ್ಲಿ ಒಟ್ಟು 70 ವಿದ್ಯಾರ್ಥಿಗಳಿದ್ದರು. ಬಹುತೇಕ ವಿದ್ಯಾರ್ಥಿಗಳು ಬೆಳಗ್ಗೆ ಗಾಢ ನಿದ್ರೆಯಲ್ಲಿದ್ದರು. ಗದ್ದಲ ಉಂಟಾದಾಗ ವಿದ್ಯಾರ್ಥಿಗಳು ಗಾಬರಿಗೊಂಡು ನೂಕುನುಗ್ಗಲು ಉಂಟಾಗಿದೆ.

ಬೆಂಕಿ ಅವಘಡದ ಬಗ್ಗೆ ಮಾಹಿತಿ ತಿಳಿದ ಕೂಡಲೇ ಅಗ್ನಿಶಾಮಕ ದಳದ ವಾಹನಗಳು ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ಪೊಲೀಸರು ಮತ್ತು ಆಡಳಿತಾಧಿಕಾರಿಗಳು ಸದ್ಯ ಸ್ಥಳದಲ್ಲಿದ್ದಾರೆ.

RELATED ARTICLES
- Advertisment -
Google search engine

Most Popular