ಪಾಟ್ನಾ: ಇಲ್ಲಿನ ರೈಲ್ವೆ ನಿಲ್ದಾಣದ ಸಮೀಪ ಹೋಟೆಲ್ ವೊಂದರಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ ಆರು ಮಂದಿ ಸಜೀವ ದಹನಗೊಂಡಿದ್ದಾರೆ. ಪಾಟ್ನಾ ಜಂಕ್ಷನ್ ರೈಲ್ವೆ ನಿಲ್ದಾಣದ ಸಮೀಪ ಗುರುವಾರ ಈ ಘಟನೆ ನಡೆದಿದೆ. ಬೆಳಿಗ್ಗೆ ಸುಮಾರು 10 ಗಂಟೆಯ ಸುಮಾರಿಗೆ ಹೋಟೆಲ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕನಿಷ್ಠ ಆರು ಮಂದಿ ಸಾವನ್ನಪ್ಪಿದ್ದಾರೆ. ಸುಮಾರು ಇಪ್ಪತ್ತಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಸದ್ಯ ಬೆಂಕಿ ಹತೋಟಿಗೆ ಬಂದಿದ್ದು, ಬೆಂಕಿ ಅವಘಡಕ್ಕೆ ಕಾರಣ ತಿಳಿದುಬಂದಿಲ್ಲ.