ಹೈದರಾಬಾದ್: ಹೈದರಾಬಾದ್‌ನ ಚಾರ್ಮಿನಾರ್ ಬಳಿಯ ಗುಲ್ಜಾರ್ ಹೌಸ್ನಲ್ಲಿರುವ ಕಟ್ಟಡದಲ್ಲಿ ಇಂದು ಬೆಳಗ್ಗೆ ಬೆಂಕಿ ಕಾಣಿಸಿಕೊಂಡಿದೆ. ಘಟನೆಯಲ್ಲಿ 6 ಮಂದಿ ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಬೆಂಕಿಯನ್ನು ನಿಯಂತ್ರಣಕ್ಕೆ ತರಲು 11 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ತಲುಪಿವೆ ಎಂದು ಅಧಿಕಾರಿ ತಿಳಿಸಿದ್ದಾರೆ . ವರದಿಯ ಪ್ರಕಾರ, ಭಾನುವಾರ ಮುಂಜಾನೆ ಸಂಭವಿಸಿದ ಬೆಂಕಿಯ ಕಾರಣ ಇನ್ನೂ ತಿಳಿದುಬಂದಿಲ್ಲ. ಮೇ 14 ರಂದು ನಡೆದ ಮತ್ತೊಂದು ಘಟನೆಯಲ್ಲಿ, ಹೈದರಾಬಾದ್‌ನ ಬೇಗಂ ಬಜಾರ್‌ನಲ್ಲಿರುವ ಮೂರು ಅಂತಸ್ತಿನ ಕಟ್ಟಡದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿತ್ತು. ಮಾಹಿತಿ ಪಡೆದ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಒಬ್ಬ ಮಹಿಳೆಯನ್ನು ರಕ್ಷಿಸಿದ್ದರು.

