
ಮಂಗಳೂರು : ಎಂಆರ್ಪಿಎಲ್ ತೈಲ ಸ್ಥಾವರದ ಘಟಕವೊಂದರಲ್ಲಿ ಭೀಕರ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಎಂಟು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ದೃಢಪಡಿಸಿದ್ದಾರೆ.
ಎಂಆರ್ಪಿಎಲ್ನ ಹೈಡ್ರೋ ಸಲ್ಫರ್ ಟ್ರೀಟ್ಮೆಂಟ್ ಘಟಕದಲ್ಲಿ ಸ್ಫೋಟ ಸಂಭವಿಸಿದ್ದು, ಬೆಂಕಿ ಹಾಗೂ ದಟ್ಟ ಹೊಗೆ ಕಾಣಿಸಿಕೊಂಡಿದೆ. ಸ್ಫೋಟದ ತೀವ್ರತೆಗೆ ಘಟಕದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಗಾಯಗೊಂಡವರ ಪೈಕಿ ರಾಜೇಶ್ ಬ್ಯಾಪ್ಟಿಸ್ಟ್ (42) ಅವರಿಗೆ ಶೇ.35ರಷ್ಟು ಸುಟ್ಟ ಗಾಯಗಳಾಗಿದ್ದು, ಅವರನ್ನು ಮುಕ್ಕದ ಶ್ರೀನಿವಾಸ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಸದ್ಯ ಘಟಕದಲ್ಲಿ ಹೊತ್ತಿಕೊಂಡಿದ್ದ ಬೆಂಕಿಯನ್ನು ನಂದಿಸಲಾಗಿದ್ದು, ಪರಿಸ್ಥಿತಿ ನಿಯಂತ್ರಣದಲ್ಲಿದೆ. ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದು ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ತಿಳಿಸಿದ್ದಾರೆ.
