Sunday, January 19, 2025
Homeಬಂಟ್ವಾಳಬೆಂಗಳೂರಿನ ಯಮಹಾ ಬೈಕ್ ಶೋರೂಂನಲ್ಲಿ ಅಗ್ನಿ ಅವಘಡ: 50ಕ್ಕೂ ಹೆಚ್ಚು ಬೈಕ್‍ ಬೆಂಕಿಗೆ ಆಹುತಿ

ಬೆಂಗಳೂರಿನ ಯಮಹಾ ಬೈಕ್ ಶೋರೂಂನಲ್ಲಿ ಅಗ್ನಿ ಅವಘಡ: 50ಕ್ಕೂ ಹೆಚ್ಚು ಬೈಕ್‍ ಬೆಂಕಿಗೆ ಆಹುತಿ

ಬೆಂಗಳೂರು: ಯಮಹಾ ಬೈಕ್ ಶೋರೂಂ ಒಂದರಲ್ಲಿ ಅಗ್ನಿ ಅವಘಡ ಸಂಭವಿಸಿ, 50ಕ್ಕೂ ಹೆಚ್ಚು ಬೈಕ್‍ಗಳು ಬೆಂಕಿಗೆ ಆಹುತಿಯಾಗಿರುವ ಘಟನೆ ಬೆಂಗಳೂರಿನ ಮಹದೇವಪುರದ ಬಿ.ನಾರಾಯಣಪುರದಲ್ಲಿ ನಡೆದಿದೆ.

ಈ ಅವಘಡ ಬುಧವಾರ ರಾತ್ರಿ 8 ಗಂಟೆ ಸುಮಾರಿಗೆ ಸಂಭವಿಸಿದೆ. 7 ಗಂಟೆಗೆ ಶೋರೂಂನ ಸಿಬ್ಬಂದಿ ಮನೆಗೆ ತೆರಳಿದ್ದರು. ಇನ್ನೂ 8 ಗಂಟೆ ಸುಮಾರಿಗೆ ಸೆಕ್ಯೂರಿಟಿ ಊಟಕ್ಕೆ ತೆರಳಿದ್ದರು. ಈ ವೇಳೆ ಅಗ್ನಿ ಅವಘಡ ಸಂಭವಿಸಿದೆ. ಅವಘಡದಿಂದ ಶೋರೂಂನಲ್ಲಿದ್ದ ಸುಮಾರು 50ಕ್ಕೂ ಹೆಚ್ಚು ಬೈಕ್ ಸುಟ್ಟು ಭಸ್ಮವಾಗಿವೆ. ಅಲ್ಲದೆ, ಶೋ ರೂಂ ಹಿಂಬದಿಯಲ್ಲಿರುವ ಸರ್ವೀಸ್ ಸೆಂಟರ್‌ಗೂ ಬೆಂಕಿ ತಗುಲಿದೆ.

ತಕ್ಷಣ ಅಗ್ನಿಶಾಮಕ ಸಿಬ್ಬಂದಿ ಹಾಗೂ ಸ್ಥಳೀಯರ ಆಗಮಿಸಿ ಬೆಂಕಿ ನಂದಿಸುವ ಕೆಲಸ ಮಾಡಿದ್ದಾರೆ. ಅಷ್ಟರಲ್ಲಾಗಲೇ ದೊಡ್ಡ ಮಟ್ಟದಲ್ಲಿ ಬೆಂಕಿ ಅವರಿಸಿ ಶೋರೂಂನಲ್ಲಿದ್ದ 40ಕ್ಕೂ ಹೆಚ್ಚು ಬೈಕ್ ಹಾಗೂ ಶೋರೂಂ ಹಿಂಭಾಗದ ಸರ್ವಿಸ್ ಸೆಂಟರ್‌ನಲ್ಲಿದ್ದ 20ಕ್ಕೂ ಹೆಚ್ಚು ಬೈಕ್‍ಗಳು ಬೆಂಕಿಗೆ ಆಹುತಿಯಾಗಿವೆ.

RELATED ARTICLES
- Advertisment -
Google search engine

Most Popular