ಬೆಳ್ಮಣ್: ಮನೆಯೊಂದಕ್ಕೆ ಬೆಂಕಿ ತಗುಲಿ ಲಕ್ಷಾಂತರ ರೂ. ನಷ್ಟವಾದ ಬಗ್ಗೆ ವರದಿಯಾಗಿದೆ. ಮುಂಡ್ಕೂರು ಮುಲ್ಲಡ್ಕ ಎಂಬಲ್ಲಿನ ಹಳೆಮನೆಗೆ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮವಾಗಿದೆ. ಆದರೆ ಪವಾಡಸದೃಶವಾಗಿ ಮನೆಯ ದೈವ ದೇವರ ಪೂಜಾ ಮಣೆ ಹಾಗೂ ಸಾಮಾಗ್ರಿಗಳಿಗೆ ಯಾವುದೇ ಹಾನಿಯಾಗಿಲ್ಲ ಎಂದು ತಿಳಿದುಬಂದಿದೆ.
ಹಳೆಮನೆ ಪುರುಷೋತ್ತಮ ಶೆಟ್ಟಿ ಎಂಬವರಿಗೆ ಸೇರಿದ ಮನೆಗೆ ಇದಾಗಿದ್ದು, ಬೆಂಕಿ ಅವಘಡವಾದ ಸಂದರ್ಭ ಮನೆಯಲ್ಲಿ ಯಾರೂ ಇರಲಿಲ್ಲ ಎನ್ನಲಾಗಿದೆ. ಮನೆಯವರು ಸಂಬಂಧಿಕರ ಮನೆಗೆ ತೆರಳಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಮನೆಯಲ್ಲಿದ್ದ ಎಲ್ಲಾ ಸಾಮಗ್ರಿಗಳು ನಾಶವಾಗಿವೆ ಎಂದು ತಿಳಿದುಬಂದಿದೆ.