ಕಾರ್ಕಳ: ನಂದಳಿಕೆ ಮಾವಿನಕಟ್ಟೆ ಅಪಘಾತ ವಲಯದಲ್ಲಿ ಗುರುವಾರ ತಡರಾತ್ರಿ ಸಂಚರಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಅಪಾಯದ ಸುಳಿವು ಅರಿತ ಚಾಲಕ ಕಾರಿನಿಂದ ಕೆಳಗೆ ಇಳಿದಿದ್ದು, ಕಾರು ಸಂಪೂರ್ಣ ಬೆಂಕಿಗಾಹುತಿಯಾಗಿದೆ. ವಿಷಯ ತಿಳಿದ ಸಮಾಜ ಸೇವಕ ಸುಪ್ರೀತ್ ಶೆಟ್ಟಿ ಕೆದಿಂಜೆ ಅವರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ತಕ್ಷಣ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಮತ್ತು ಪೊಲೀಸ್ ಸಿಬ್ಬಂದಿ ಸಾರ್ವಜನಿಕರ ಬೆಂಕಿ ನಂದಿಸಿದರು.