Saturday, July 20, 2024
Homeಅಪಘಾತಉಡುಪಿ | ಪೆಟ್ರೋಲ್ ಪಂಪ್ ನಲ್ಲಿ ಕಾಣಿಸಿಕೊಂಡ ಬೆಂಕಿ; ಕಾರ್ಮಿಕರ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರೀ...

ಉಡುಪಿ | ಪೆಟ್ರೋಲ್ ಪಂಪ್ ನಲ್ಲಿ ಕಾಣಿಸಿಕೊಂಡ ಬೆಂಕಿ; ಕಾರ್ಮಿಕರ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರೀ ದುರಂತ!

ಉಡುಪಿ: ಇಲ್ಲಿನ ಪೆಟ್ರೋಲ್ ಪಂಪ್ ನಲ್ಲಿ ಸಂಭವಿಸಬಹುದಾಗಿದ್ದ ಆಕಸ್ಮಿಕ ಅಗ್ನಿ ಅವಘಡ ಕಾರ್ಮಿಕರ ಸಮಯ ಪ್ರಜ್ಞೆಯಿಂದ ತಪ್ಪಿದೆ. ಉಡುಪಿ ಬಸ್ಸು ನಿಲ್ದಾಣದ ಬಳಿಯ ಪೆಟ್ರೋಲ್ ಪಂಪ್ ನ ಜನರೇಟರ್ ನಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಆಗಿತ್ತು. ಇದರಿಂದ ಬೆಂಕಿ ಕಾಣಿಸಿಕೊಂಡಿತ್ತು. ತಕ್ಷಣ ಪಂಪ್ ನ ಸಿಬ್ಬಂದಿ ಎಚ್ಚೆತ್ತು ಜನರೇಟರ್ ಅನ್ನು ರಾಷ್ಟ್ರೀಯ ಹೆದ್ದಾರಿಗೆ ತಂದು ಬೆಂಕಿ ನಂದಿಸಿದ್ದಾರೆ. ಬಳಿಕ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಇದರಿಂದ ಆಗಬಹುದಾಗಿದ್ದ ಭಾರೀ ದೊಡ್ಡ ಅನಾಹುತವೊಂದು ತಪ್ಪಿದಂತಾಗಿದೆ.

ಉಡುಪಿ ಸಿಟಿಬಸ್ಸು ನಿಲ್ದಾಣ ಬಳಿಯ ರಾಷ್ಟ್ರೀಯ ಹೆದ್ದಾರಿಯ ಮುಖ್ಯ ರಸ್ತೆಯ ಮಂಗೇಶ ಮಹಾಲಕ್ಷ್ಮಿ ಪೆಟ್ರೋಲ್ ಪಂಪ್ ನಲ್ಲಿ ಈ ಅವಘಡ ಸಂಭವಿಸಿದೆ. ಕಾರ್ಮಿಕರ ಸಮಯ ಪ್ರಜ್ಞೆಗೆ ಈಗ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ.

RELATED ARTICLES
- Advertisment -
Google search engine

Most Popular