ಮಡಿಕೇರಿ : ಶ್ರೀದೇವಿ ಚಾರಿಟೇಬಲ್ ಟ್ರಸ್ಟ್(ರಿ)ನ ಪ್ರಥಮ ವಾರ್ಷಿಕ ಮಹಾಸಭೆಯು ದಿನಾಂಕ 13-09-2026 ರ ಆದಿತ್ಯವಾರದಂದು ಮಡಿಕೇರಿ ತಾಲೂಕಿನ ಹೊದ್ದೂರು ಗ್ರಾಮದ ಪಾಲೆಮಾಡುವಿನಲ್ಲಿ ನಡೆಯಿತು. ಟ್ರಸ್ಟ್ ನ ಅಧ್ಯಕ್ಷರಾದ ನವೀನ್ ಕುಮಾರ್ ರವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಟ್ರಸ್ಟ್ ನ ಸಾಮಾಜಿಕ ಸೇವಾ ಚಟುವಟಿಕೆಗಳನ್ನು ಇನ್ನಷ್ಟು ವಿಸ್ತರಿಸುವುದು ಹಾಗೂ ಸಮಾಜದ ವಿವಿಧ ವರ್ಗಗಳ ಅಭಿವೃದ್ಧಿಗೆ ಕೈಜೋಡಿಸುವ ಕುರಿತು ಚರ್ಚಿಸಲಾಯಿತು. ಟ್ರಸ್ಟ್ ವತಿಯಿಂದ ಎಸ್ ಎಸ್ ಎಲ್ ಸಿ ಹಾಗೂ ಪಿ ಯು ಸಿ ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆದುಕೊಂಡವರಿಗೆ ಅವರ ಮುಂದಿನ ಭವಿಷ್ಯ ಉಜ್ವಲವಾಗಿರಲಿ ಎನ್ನುವ ಆಶಯದೊಂದಿಗೆ ಸನ್ಮಾನಿಸಲಾಯಿತು. ಟ್ರಸ್ಟ್ ನ ಸದಸ್ಯರಿಗೆ, ಮಕ್ಕಳಿಗೆ ಹಾಗೂ ಸಾರ್ವಜನಿಕರಿಗೆ ವಿವಿಧ ಮನೋರಂಜನಾ ಕ್ರೀಡೆಗಳು ಮತ್ತು ಸ್ಪರ್ಧೆಗಳನ್ನು ಆಯೋಜಿಸಿ, ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.

