ವಿವೇಕಾನಂದ ಪದವಿಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ಪ್ರಥಮ ಪಿಯುಸಿ ಸಿ ಎ ಫೌಂಡೇಶನ್ ವಿದ್ಯಾರ್ಥಿಗಳ ಹಾಗೂ ಪೋಷಕರ ಸಮಾಲೋಚನಾ ಸಭೆಯು ನಡೆಯಿತು. ಕಾಲೇಜಿನ ವಾಣಿಜ್ಯ ವಿಭಾಗದ ಮುಖ್ಯಸ್ಥರು ಹಾಗೂ ವಿವೇಕಾನಂದ ಇನ್ಸ್ಟಿಟ್ಯೂಟ್ ಫಾರ್ ಸಿಎ ಸ್ಟಡೀಸ್(VICAS) ಇದರ ಸಂಯೋಜಕರಾದ ದೇವಿಪ್ರಸಾದ್ ಇವರು ವಿದ್ಯಾರ್ಥಿಗಳಿಗೆ ಸಿಎ ಫೌಂಡೇಶನ್ ಕೋರ್ಸ್ ಬಗ್ಗೆ ಮಾಹಿತಿಯನ್ನು ನೀಡಿದರು.ಈ ಸಂದರ್ಭದಲ್ಲಿ ಕಾಲೇಜಿನ ಶೈಕ್ಷಣಿಕ ಸಂಯೋಜಕರಾದ ಶ್ರೀವತ್ಸ ಎನ್ ಉಪಸ್ಥಿತರಿದ್ದು ವಿದ್ಯಾರ್ಥಿಗಳಿಗೆ ಸೂಕ್ತ ಸಲಹೆಗಳನ್ನಿತ್ತು ಸಹಕರಿಸಿದರು. ಸಭೆಯಲ್ಲಿ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ಸಿ ಎ ಆಕಾಂಕ್ಷಿ ವಿದ್ಯಾರ್ಥಿಗಳು ಅವರ ಪೋಷಕರೊಂದಿಗೆ ಭಾಗಿಯಾದರು.
ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಸಿ ಎ ಫೌಂಡೇಶನ್ ವಿದ್ಯಾರ್ಥಿಗಳ ಹಾಗೂ ಪೋಷಕರ ಸಮಾಲೋಚನಾ ಸಭೆ
RELATED ARTICLES