ಉಡುಪಿ : ಮಂಗಳೂರಿನಿಂದ ಮೀನು ಸಾಗಿಸುತ್ತಿದ್ದ ಲಾರಿಯೊಂದು ಟೈರ್ ಸ್ಫೋಟಗೊಂಡ ಪರಿಣಾಮ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಪಲ್ಟಿಯಾದ ಘಟನೆ Ambagilu ಸಮೀಪ ಮಂಗಳವಾರ ನಡೆದಿದೆ.
ಲಾರಿಯ ಹಿಂಬದಿ ಟೈರ್ ಏಕಾಏಕಿ ಬ್ಲಾಸ್ಟ್ ಆಗಿದ್ದು, ಇದರಿಂದ ವಾಹನದ ಮೇಲಿನ ನಿಯಂತ್ರಣ ಕಳೆದುಕೊಂಡ ಚಾಲಕ ರಸ್ತೆ ಬದಿಗೆ ಉರುಳಿ ಬಿದ್ದಿದ್ದಾನೆ ಎಂದು ತಿಳಿದುಬಂದಿದೆ.
ಅಪಘಾತ ಸಂಭವಿಸಿದ ವೇಳೆ ಲಾರಿಯಲ್ಲಿ ಚಾಲಕ ಒಬ್ಬರೇ ಇದ್ದರು. ಘಟನೆಯಲ್ಲಿ ಲಾರಿಗೆ ಹಾನಿಯಾಗಿದ್ದು, ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.
ಅಪಘಾತ ಕಂಡ ಸ್ಥಳೀಯರು ತಕ್ಷಣ ನೆರವಿಗೆ ಧಾವಿಸಿದ್ದು, ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿ ವಾಹನ ತೆರವು ಕಾರ್ಯ ಕೈಗೊಂಡಿದ್ದಾರೆ.
ಅಪಘಾತದ ಪರಿಣಾಮ ಕೆಲಕಾಲ ರಸ್ತೆ ಸಂಚಾರದಲ್ಲಿ ವ್ಯತ್ಯಯ ಉಂಟಾಗಿತ್ತು.

