ಸರಕಾರಿ ಉನ್ನತಿ ಕರೆಸಿದ ಹಿರಿಯ ಪ್ರಾಥಮಿಕ ಶಾಲೆ ಕೆ ಎಸ್ ರಾವ್ ನಗರ ದಲ್ಲಿ ಧ್ವಜಾರೋಹಣ

0
52

ಸರಕಾರಿ ಉನ್ನತಿ ಕರೆಸಿದ ಹಿರಿಯ ಪ್ರಾಥಮಿಕ ಶಾಲೆ ಕೆ ಎಸ್ ರಾವ್ ನಗರ ದಲ್ಲಿ ಧ್ವಜಾರೋಹಣ ಸರಕಾರಿ ಉನ್ನತಿ ಕರೆಸಿದ ಹಿರಿಯ ಪ್ರಾಥಮಿಕ ಶಾಲೆ ಕೆ ಎಸ್ ರಾವ್ ನಗರ ದಲ್ಲಿ ಧ್ವಜಾರೋಹಣ ಕಾರ್ಯಕ್ರಮ ಮುಲ್ಕಿಯ ನಗರ ಪಂಚಾಯತ್ ಮುಖ್ಯ ಅಧಿಕಾರಿಯಾದ ಮಧುಕರ್ ಜರಗಿಸಿ 80ನೇ ಸ್ವಾತಂತ್ರ್ಯೋತ್ಸವಕ್ಕೆ ಶುಭ ಹಾರೈಸಿದರು.

ತದನಂತರ ಲಯನ್ಸ್ ಜಿಲ್ಲಾ ದ್ವಿತೀಯ ಉಪರಾಜ್ಯಪಾಲರಾದ ಲಯನ್ ವೆಂಕಟೇಶ ಹೆಬ್ಬಾರ್ ಮಹಾತ್ಮ ಗಾಂಧಿ ಹಾಗೂ ಡಾಕ್ಟರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ದೇಶದ ಸ್ವತಂತ್ರಕ್ಕಾಗಿ ಅನೇಕ ಹಿರಿಯ ಸ್ವತಂತ್ರ ಸೇನಾನಿಗಳು ತಮ್ಮ ಪ್ರಾಣವನ್ನು ಪಣಕ್ಕಿಟ್ಟು ನಮಗೆ ಸ್ವಾತಂತ್ರ್ಯ ತಂದುಕೊಟ್ಟರು. ನಾವು ಮುಂದಿನ ದಿನಗಳಲ್ಲಿ ದೇಶಕ್ಕಾಗಿ ದೇಶದ ರಕ್ಷಣೆಗಾಗಿ ಸದಾ ಸಿದ್ದರಾಗಿರಬೇಕು ಎಂದು ಕರೆ ನೀಡಿದರು ಕಾರ್ಯಕ್ರಮದಲ್ಲಿ ಲಯನ್ಸ್ ಕ್ಲಬ್ ಬಪ್ಪನಾಡು ಇನ್ಸ್ಪೈರ್ ಅಧ್ಯಕ್ಷರಾದ ಕಲ್ಲಪ್ಪ ತಡವಲಗ , ಪ್ರತಿಭಾ ಹೆಬ್ಬಾರ್ ,ಶಾಲಾ ಮುಖ್ಯೋಪಾಧ್ಯಾಯರಾದ ದಿನೇಶ್ ಕೆ, ಪ್ರೌಢಶಾಲಾ ಮುಖ್ಯ ಉಪಾಧ್ಯಾಯನಿ ಶ್ರೀಮತಿ ರಮಣಿ, ಎಸ್ ಡಿ ಎಂ ಸಿ ಅಧ್ಯಕ್ಷ ರುಗಳಾದ ಜ್ಯೋತಿ, ಸಿದ್ದಪ್ಪ, ಶಿಕ್ಷಕ ಶಿಕ್ಷಕೇತರ ವೃಂದದವರು ಉಪಸ್ಥಿತರಿದ್ದರು ಇಪ್ಪತ್ತಕ್ಕೂ ಅಧಿಕ ವಿದ್ಯಾರ್ಥಿಗಳು ಸ್ವತಂತ್ರ ಸೇನಾನಿಗಳ ವೇಷಭೂಷಣವನ್ನು ಧರಿಸಿ ಸಂಭ್ರಮಿಸಿದರು ಲಯನ್ಸ್ ಕ್ಲಬ್ ಬಪ್ಪನಾಡು ಇನ್ಸ್ಪೈರ್ ವತಿಯಿಂದ ಮಕ್ಕಳಿಗೆ ಸಿಹಿ ತಿಂಡಿ ವಿತರಿಸಲಾಯಿತು ಕಾರ್ಯಕ್ರಮವನ್ನು ಅಧ್ಯಾಪಕಿ ಶ್ರೀಮತಿ ಶ್ರೀದೇವಿ ನಿರೂಪಿಸಿದರು.