ದಾವಣಗೆರೆ : ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ಆಶ್ರಯದಲ್ಲಿ ಪ್ರತೀ ವರ್ಷದಂತೆ ಈ ವರ್ಷವೂ ಆ. 15 ರಂದು ಶನಿವಾರ ಬೆಳಿಗ್ಗೆ 8 ಗಂಟೆಗೆ ನಗರದ ಕುವೆಂಪು ರಸ್ತೆಯಲ್ಲಿರುವ ಕಲಾಕುಂಚ ಕಛೇರಿಯ ಹೊರಾಂಗಣದಲ್ಲಿ ಭಾರತದ ಸ್ವಾತಂತ್ರ್ಯೊತ್ಸವ ದಿನಾಚರಣೆ ಪ್ರಯುಕ್ತ ನಮ್ಮ ದೇಶದ ಧ್ವಜಾರೋಹಣ ಹಮ್ಮಿಕೊಳ್ಳಲಾಗಿದೆ ಎಂದು ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ಸಂಸ್ಥಾಪಕರಾದ ಸಾಲಿಗ್ರಾಮ ಗಣೇಶ್‌ಶೆಣೈ ತಿಳಿಸಿದ್ದಾರೆ.
ಕಲಾಕುಂಚ ಸಾಂಸ್ಕೃತಿಕ ಸಂಸ್ಥೆ ಅಧ್ಯಕ್ಷರಾದ ವಾಸುದೇವ ಎಲ್.ರಾಯ್ಕರ್‌ರವರು ಧ್ವಜಾರೋಹಣ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕಲಾಕುಂಚ ಗೌರವ ಅಧ್ಯಕ್ಷರಾದ ಕೆ.ಹೆಚ್.ಮಂಜುನಾಥ್, ಕಲಾಕುಂಚ ಮಹಿಳಾ ವಿಭಾಗದ ಅಧ್ಯಕ್ಷರಾದ ಹೇಮಾ ಶಾಂತಪ್ಪ ಪೂಜಾರಿ ಆಗಮಿಸಲಿದ್ದಾರೆ. ಕಲಾಕುಂಚ ವಿವಿಧ ಬಡಾವಣೆ ಶಾಖೆಗಳ ಅಧ್ಯಕ್ಷರುಗಳು, ಪದಾಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಈ ಸ್ವಾತಂತ್ರ್ಯೊತ್ಸವ ಯಶಸ್ವಿಗೊಳಿಸಬೇಕಾಗಿ ಕಲಾಕುಂಚದ ಪ್ರಧಾನ ಕಾರ್ಯದರ್ಶಿ ಕೆ.ಸಿ.ಉಮೇಶ್ ವಿನಂತಿಸಿದ್ದಾರೆ.

