ದಾವಣಗೆರೆ : ದಾವಣಗೆರೆಯ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯವತಿಯಿAದ ಪ್ರತೀ ವರ್ಷದಂತೆ ಈ ವರ್ಷವೂ ನವಂಬರ್ 01 ರಂದು ಭಾನುವಾರ ಬೆಳಿಗ್ಗೆ 8 ಗಂಟೆಗೆ ದಾವಣಗೆರೆಯ ಕಸ್ತೂರ್ಬಾ ಬಡಾವಣೆಯ ಕುವೆಂಪು ರಸ್ತೆಯಲ್ಲಿರುವ ಕಲಾಕುಂಚ ಕಛೇರಿಯ ಹೊರಾಂಗಣದಲ್ಲಿ ಕನ್ನಡ ತಾಯಿ ಭುವನೇಶ್ವರಿಗೆ ಪೂಜಿಸಿ ಕನ್ನಡ ಬಾವುಟ ಧ್ವಜಾರೋಹಣ ನಡೆಯಲಿದೆ ಎಂದು ಕಲಾಕುಂಚ ಸಾಂಸ್ಕೃತಿಕ ಸಂಸ್ಥೆ ಅಧ್ಯಕ್ಷರಾದ ವಾಸುದೇವ ಎಲ್. ರಾಯ್ಕರ್ ತಿಳಿಸಿದ್ದಾರೆ.
ಕಲಾಕುಂಚ ಅಂಗ ಸಂಸ್ಥೆ ಯಕ್ಷಂಗ ಯಕ್ಷಗಾನ ಸಂಸ್ಥೆಯ ಅಧ್ಯಕ್ಷರಾದ ಮಲ್ನಾಡಿ ಪ್ರಭಾಕರ ಶೆಟ್ಟಿ ಧ್ವಜಾರೋಹಣ ನೆರವೇರಿಸಲಿದ್ದಾರೆ. ಈ ಕನ್ನಡ ಅಭಿಮಾನಕ್ಕಾಗಿ ಕಲಾಕುಂಚದ ವಿವಿಧ ಬಡಾವಣೆಯ ಶಾಖೆಯ ಅಧ್ಯಕ್ಷರುಗಳು, ಪದಾಧಿಕಾರಿಗಳು, ಸರ್ವ ಸದಸ್ಯರುಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕನ್ನಡ ರಾಜ್ಯೋತ್ಸವ ಯಶಸ್ವಿಗೊಳಿಸಬೇಕಾಗಿ ಸಂಸ್ಥೆಯ ಸಂಸ್ಥಾಪಕರಾದ ಸಾಲಿಗ್ರಾಮ ಗಣೇಶ್ ಶೆಣೈ, ಕಲಾಕುಂಚ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಕೆ.ಸಿ.ಉಮೇಶ್ ವಿನಂತಿಸಿದ್ದಾರೆ.

