ಪೂಂಜಾಲಕಟ್ಟೆ: ಚುನಾವಣೆ ವೇಳೆ ರೈತರು ತಮ್ಮ ಕೋವಿಗಳನ್ನು ಠೇವಣಿ ಇರಿಸುವ ಆದೇಶವನ್ನು ವಿರೋಧಿಸಿ ಬಂಟ್ವಾಳ ತಾಲೂಕಿನ ರೈತರೊಬ್ಬರು ಚುನಾವಣಾ ಬಹಿಷ್ಕಾರಕ್ಕೆ ಕರೆ ನೀಡಿ ಫ್ಲೆಕ್ಸ್ ಅಳವಡಿಸಿದ್ದಾರೆ. ಪ್ರತಿ ಬಾರಿ ಚುನಾವಣೆಯ ವೇಳೆ ಕೋವಿಗಳನ್ನು ಠಾಣೆಯಲ್ಲಿಡುವುದರಿಂದ ಕಾಡುಪ್ರಾಣಿಗಳ ಹಾವಳಿಗೆ ಕೃಷಿ ಹಾಳಾಗಿ ರೈತರು ನಷ್ಟ ಅನುಭವಿಸುವಂತಾಗಿದೆ. ಬಂಟ್ವಾಳ ತಾಲೂಕಿನ ಬಡಗಕಜೆಕಾರು ಮತ್ತು ತೆಂಕಕಜೆಕಾರು ಗ್ರಾಮದ ಎಲ್ಲಾ ಅಪರಾಧ ಇಲ್ಲದ ಕೋವಿ ಬಳಕೆದಾರರು ಚುನಾವಣಾ ಮತ ಬಹಿಷ್ಕರಿಸುವಂತೆ ವಿನಂತಿಸಿ ತಾ.ಪಂ. ಮಾಜಿ ಅಧ್ಯಕ್ಷ ಸತೀಶ್ಚಂದ್ರ ಹೊಸಮನೆ ಅವರು ಕೋವಿ ಬಳಕೆದಾರರ ಪರವಾಗಿ ಫ್ಲೆಕ್ಸ್ ಅಳವಡಿಸಿದ್ದಾರೆ.