ಸೆ.13ರಂದು ಕಳತ್ತೂರು ಶ್ರೀ ಬಬ್ಬುಸ್ವಾಮಿ ದೈವಸ್ಥಾನದಲ್ಲಿ ಹೂವಿನ ಪೂಜೆ

0
32

ಕಳತ್ತೂರು : ಕಳತ್ತೂರು ಶ್ರೀ ಬಬ್ಬುಸ್ವಾಮಿ ದೈವಸ್ಥಾನದಲ್ಲಿ ಸೆಪ್ಟೆಂಬರ್ 13ರಂದು ಭಕ್ತಿಪೂರ್ವಕ ಧಾರ್ಮಿಕ ಕಾರ್ಯಕ್ರಮ ನಡೆಯಲಿದೆ.

ಅಂದು ಬೆಳಗ್ಗೆ 9.30ರಿಂದ ದೈವಸ್ಥಾನದಲ್ಲಿ ಹೂವಿನ ಪೂಜೆ ಹಾಗೂ ಕಂಬಿಗಾರ ದರ್ಶನ ಸೇವೆ ಜರಗಲಿದೆ. ಈ ಸಂದರ್ಭದಲ್ಲಿ ವಿವಿಧ ಧಾರ್ಮಿಕ ವಿಧಿವಿಧಾನಗಳು ನಡೆಯಲಿದ್ದು, ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಶ್ರೀ ದೇವರ ಪ್ರಸಾದ ಸ್ವೀಕರಿಸಿ ದೈವದ ಕೃಪೆಗೆ ಪಾತ್ರರಾಗುವಂತೆ ಶ್ರೀ ಬಬ್ಬುಸ್ವಾಮಿ ಸೇವಾ ಸಮಿತಿ ವಿನಂತಿಸಿದೆ.