ಸೈಲಸ್ ಪದವಿ ಪೂರ್ವ ಕಾಲೇಜಿನಲ್ಲಿ ವನಮಹೋತ್ಸವ ಕಾರ್ಯಕ್ರಮ

0
30

ವಿದ್ಯಾರ್ಥಿಗಳು ತಮ್ಮ ಕನಸನ್ನು ನನಸಾಗಿಸಿಕೊಳ್ಳಲು ಶ್ರದ್ದೆಯಿಂದ ಅಭ್ಯಾಸ ಮಾಡಬೇಕು ಯಾವುದೇ ಸಂದರ್ಭದಲ್ಲಿ ಹತಾಶೆಗೊಳಗಾಗದೆ ಸಾಲುಮರದ ತಿಮ್ಮಕ್ಕನ ಬದುಕಿನಂತೆ ಸಮಾಜಮುಖಿ ಕೆಲಸಗಳಲ್ಲಿ ತೊಡಗಿಸಿಕೊಂಡು ಸಾರ್ಥಕತೆಯನ್ನು ಪಡೆಯಬೇಕು ಎಂದು ಉಡುಪಿ ಜಿಲ್ಲಾ ಉಪ ನಿರ್ದೇಶಕ ಮಾರುತಿ ಹೇಳಿದರು. ಅವರು ಸೈಲಸ್ ಪದವಿಪೂರ್ವ ಕಾಲೇಜಿನಲ್ಲಿ ಬುಧವಾರ ಆಯೋಜಿಸಿದ್ದ ವನಮಹೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ, ಮಾತನಾಡುತ್ತಿದ್ದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಪ್ರಿನ್ಸಿಪಾಲ್ ಡಾ .ಜಾರ್ಜ್, ವನಮಹೋತ್ಸವ ಒಂದು ಹಬ್ಬವಾಗಿದ್ದು ಪ್ರಾಕೃತಿಕ ಸಮತೋಲನವನ್ನು ಕಾಪಾಡಿಕೊಳ್ಳುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಹೇಳಿದರು.
ಒಂದು ಮುಕ್ಕಾಲು ಕೋಟಿ ಬೆಲೆ ಬಾಳುವ ಮರಗಳನ್ನು ನೆಟ್ಟು ಪೋಷಿಸಿದ ಸಾಲುಮರದ ತಿಮ್ಮಕ್ಕನವರಿಗೆ ಸಂಬಂಧಿತ ಹಾಗೂ ಅರಣ್ಯೀಕರಣಕ್ಕೆ ಸಂಬಂಧಿಸಿದ ಕಿರು ಚಿತ್ರಗಳನ್ನು ಪ್ರದರ್ಶಿಸಲಾಯಿತು. ಉಪನ್ಯಾಸಕಿ ರಮ್ಯಾ ಕಾರ್ಯಕ್ರಮ ನಿರೂಪಿಸಿದರು. ಬಳಿಕ ಮಾನ್ಯ ಉಪ ನಿರ್ದೇಶಕರು ಕಾಲೇಜಿನ ಆವರಣದಲ್ಲಿ ಸಾಂಕೇತಿಕವಾಗಿ ಗಿಡವನ್ನು ನೆಟ್ಟು ವನಮಹೋತ್ಸವಕ್ಕೆ ಚಾಲನೆ ನೀಡಿದರು.

LEAVE A REPLY

Please enter your comment!
Please enter your name here